ಅರಕಲಗೂಡು: ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳತ್ತಲೂ ಗಮನ ಹರಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ಎಚ್.ಎಸ್. ಮಂಜು ಶೆಟ್ಟಿಗೌಡ ತಿಳಿಸಿದರು.

ಕಾಲೇಜಿನಲ್ಲಿ ಸೋಮವಾರ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ,ಸರ್ಕಾರಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿದಾಗ ಇವು ಉಳಿದು ಬೆಳೆಯಲು ಸಾಧ್ಯ, ಸರ್ಕಾರಿ ಕಾಲೇಜುಗಳನ್ನು ಉಳಿಸುವ ಮಹತ್ತರವಾದ ಜವಾಬ್ದಾರಿ ವಿದ್ಯಾರ್ಥಿಗಳ ಸಾಧನೆಯ ಮೇಲೆ ನಿಂತಿದೆ.

ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ರೂಪಿಸಿದೆ, ಇವುಗಳ ಪ್ರಯೋಜನ ಪಡೆದು ಭವಿಷ್ಯದ ಬದುಕು ಕಟ್ಟಿಕೊಳ್ಳಬೇಕು ಎಂದರು.

ಶಿಕ್ಷಕ ಬಸವರಾಜಪ್ಪ ಸಮಾರೋಪ ಭಾಷಣ ಮಾಡಿದರು. ಪ್ರಾಂಶುಪಾಲೆ ಪದ್ಮ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸಿಡಿಸಿ ಸದಸ್ಯರಾದ ಮೋಹನ್ ಮಂಜು, ಸವಿತಾ ಸುರೇಶ್,, ಮಹೇಶ್ವರಿ ಕಿರಣ್ ಕುಮಾರ್, ಉಪನ್ಯಾಸಕರಾದ ವಾಸು,ಹೇಮಾವತಿ, ಶ್ವೇತಾ, ಜ್ಯೋತಿ, ಸುರಕ್ಷಾ, ರೋಜಾ, ರಾಜೇಶ್, ಚೇತನ್, ಚಾಂದಿನಿ ಇದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *