
ಸಕಲೇಶಪುರ : ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಬೆಳಗೋಡು ವೃತ್ತದಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು
ಸಂವಿಧಾನ ಜಾಥ ರಥಯಾತ್ರೆ ಬೆಳಗೋಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಶಾಲೆಯ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಮೆರವಣಿಗೆ ಮುಖಾಂತರ ಅದ್ದೂರಿಯಾಗಿ ಸಂವಿಧಾನ ಜಾಗೃತಿ ಜಾಥ ರಥಯಾತ್ರೆಯನ್ನು ನಡೆಸಲಾಯಿತು.
ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಧರಣೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಆನಂದ್ ಮೂರ್ತಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ನರಸಿಂಹಯ್ಯ, ಕಾರ್ಯಕ್ರಮವನ್ನು ದೀಪ ಬೆಳಗುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಸದಸ್ಯರುಗಳು, ಗ್ರಾಮದ ಮುಖಂಡರುಗಳ ಸಮ್ಮುಖದಲ್ಲಿ ಸಂವಿಧಾನ ಜಾಗೃತಿ ರಥ ಯಾತ್ರೆಯೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು, ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಧರಣೇಶ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮವನ್ನು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಾದ ಆನಂದ್ ಮೂರ್ತಿ, ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು.
ಸಂವಿಧಾನ ಪ್ರಸ್ತಾವನೆಯನ್ನು ಸವಿಸ್ತಾರವಾಗಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಉಪನ್ಯಾಸಕರಾದ ಯತೀಶ್ ರವರಿಂದ ತಿಳಿಸಿಕೊಡಲಾಯಿತು.
ಈ ಕಾರ್ಯಕ್ರಮದಲ್ಲಿ ಎಲ್ಲಾ ಗ್ರಾಮದ ಮುಖಂಡರು, ಶಾಲೆ ಮಕ್ಕಳು ಗ್ರಾಮ ಪಂಚಾಯತಿಯ, ಅಧ್ಯಕ್ಷರು ಧರಣೇಶ್,ಉಪಾಧ್ಯಕ್ಷರಾದ ಪ್ರೇಮ, ಸದಸ್ಯರುಗಳಾದ, ದೊಡ್ಡಿರಯ್ಯ, ಮಂಜುಳ ರೇಖಾ ನಸೀಮಾ ಶಾರದ ಕವಿತಾ ಮಾಜಿ ಅಧ್ಯಕ್ಷರುಗಳಾದ ಉಮಾ ಜಗದೀಶ್, ಪುನೀತ್, ಭುವನಾಕ್ಷ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು, ಪ್ರಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಸವರಾಜ್, ಗ್ರಾಮದ ಮುಖಂಡರುಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಲಕ್ಷ್ಮಿ ನರಸಿಂಹಯ್ಯ, ಗ್ರಾಮ ಪಂಚಾಯತಿ ಎಲ್ಲಾ ಸಿಬ್ಬಂದಿ ವರ್ಗದವರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಗೊಳಗೊಂಡೆ, ಹಾಗೂ ಬೆಳಗೋಡು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಹಾಜರಿದ್ದು ದೇಶಭಕ್ತಿ ಗೀತೆ, ಸಾಂಸ್ಕೃತಿಕ ನೃತ್ಯ ಮಾಡುವ ಎಲ್ಲರ ಮನರಂಜಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.



