
ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗರಾಜ್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಹೆತ್ತೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಒಟ್ಟು10 ಸದಸ್ಯರ ಬಲ ಹೊಂದಿರುವ ಹೆತ್ತೂರು ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ನಾಗರಾಜ್ (ಹಳ್ಳಿ ಬೈಲು) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಚುನಾವಣೆ ಅಧಿಕಾರಿ ಆದಿತ್ಯ ಅವಿರೋಧವಾಗಿ ಅಧ್ಯಕ್ಷರಾಗಿ ನಾಗರಾಜ್ ರವರನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ನಂತರ ನೂತನ ಅಧ್ಯಕ್ಷರಾದ ನಾಗರಾಜ್ ಮಾತನಾಡಿ ಎಲ್ಲರ ಇಚ್ಛೆಯಂತೆ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ್ದು, ಅಧ್ಯಕ್ಷರಾಗಿ ಆಯ್ಕೆ ಮಾಡಿದ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರುಗಳಿಗೆ, ನಮ್ಮ ನೆಚ್ಚಿನ ಈ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರಿಗೆ ಹಾಗೂ ಬಿಜೆಪಿಯ ಎಲ್ಲಾ ಹಿರಿಯ ಮುಖಂಡರುಗಳಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು.
ಈ ಹಿಂದೆ ಇದ್ದ ಅಧ್ಯಕ್ಷರಿಗೆ ಹೇಗೆ ಸಹಕಾರ ನೀಡಿದ್ದೀರಾ ಹಾಗೆ ನನಗೂ ಕೂಡ ಅದೇ ರೀತಿಯಲ್ಲಿ ನಿಮ್ಮೆಲ್ಲರ ಸಹಕಾರ ನೀಡಿ ನಿಮ್ಮ ಮಾರ್ಗದರ್ಶನದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದರು.ಬಿಜೆಪಿ ಕಾರ್ಯಕರ್ತರು ಹೆತ್ತೂರಿನ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಶಾಸಕರ ಸಹೋದರ ಯೋಗೇಶ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಗೌಡ, ಬಿಜೆಪಿ ಯುವ ಮುಖಂಡ ಅಶ್ವಥ್, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷರು ಶ್ವೇತ ಪ್ರಸನ್ನ, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಉಮೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ಡೀಲಕ್ಷ, ಎಸ್ಸಿ ಮೋರ್ಚ ತಾಲೂಕು ಉಪಾಧ್ಯಕ್ಷ ದಿನೇಶ್ ಐಗೂರು,ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರುಗಳು ಹಾಜರಿದ್ದರು.




