ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ತಾಲೂಕು‌ ಶೆಟ್ಟಿಹಳ್ಳಿ ಗ್ರಾಮದ ಹೇಮಾವತಿ ಹಿನ್ನೀರಿನಲ್ಲಿ ನಡೆದಿದೆ.

ಸ್ನೇಹಿತರೊಂದಿಗೆ ಈಜಲು ತೆರಳಿದ್ದಾಗ ವಿದ್ಯಾರ್ಥಿ ನೀರಿನಲ್ಲಿ ಮುಗಿ ಮೃತಪಟ್ಟಿದ್ದಾನೆ.

ಬೇಲೂರು ಮೂಲದ ಗಿರೀಶ್ (20) ಮೃತ ಯುವಕ ಹಾಸನದ ರಾಜೀವ್ ಕಾಲೇಜ್‌ನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ. ಕಾಲೇಜಿಗೆ ರಜಾ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಗಿರೀಶ್ ಈಜಲು ತೆರಳಿದ್ದ. ಸರಿಯಾಗಿ ಈಜು ಬಾರದದಿದ್ದರೂ ನೀರಿಗೆ ಇಳಿದಿದ್ದ. ಹೀಗಾಗಿ ದುರ್ಘಟನೆ ಸಂಭವಿಸಿದೆ.

ಮೃತದೇಹವನ್ನು ಅಗ್ನಿಶಾಮಕದಳ ಹಾಗೂ ಪೊಲೀಸ್ ಸಿಬ್ಬಂದಿ ಹೊರತೆಗೆದಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *