ಸಕಲೇಶಪುರ ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಬೈಕೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತವಾದ ಅಂಗನವಾಡಿ ಉದ್ಘಾಟನಾ ಕಾರ್ಯಕ್ರಮ ಶಾಸಕರಾದ ಸಿಮೆಂಟ್ ಮಂಜುರವರು ನೆರವೇರಿಸಿದರು

ನಂತರ ಅವರು ಮಾತನಾಡಿ ಮಕ್ಕಳ ಪೌಷ್ಟಿಕತೆಯ ಬಗ್ಗೆ ಪೋಷಕರು ಹೆಚ್ಚಿನ ಗಮನಹರಿಸಬೇಕು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರದಿಂದ ಈ ಸುಸಜ್ಜಿತವಾದ ಅಂಗನವಾಡಿ ನೀಡಿದ್ದು ಎಲ್ಲರೂ ಇದರ ಸದುಪಯೋಗ ಪಡೆಯಬೇಕೆಂದು ಹೇಳಿದರು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಸ್ ಡಿ ಸತೀಶ್ ಮತ್ತು ಸದಸ್ಯರಾದ ದೇವರಾಜ್ ತಾಲೂಕು ಪಂಚಾಯಿತಿ ನಿರ್ದೇಶಕರಾದ ಆದಿತ್ಯ ಮತ್ತು ಬಿರಡಳ್ಳಿ ಗ್ರಾಮ ಪಂಚಾಯತಿಯ ಸದಸ್ಯರುಗಳು ಹಾಜರಿದ್ದರು .

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *