ಸಕಲೇಶಪುರ : ಫೆಬ್ರವರಿ 6 ರಿಂದ ಆರಂಭಗೊಂಡಿರುವ ಸಂವಿಧಾನ ಜಾಗೃತಿ ಜಾಥ ಇಂದು ಉಚ್ಚಂಗಿ ಗ್ರಾಮ ಪಂಚಾಯಿತಿಗೆ ತಲುಪಿದ ವೇಳೆ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಜನ ಸಾಮಾನ್ಯರಿಗೆ ಸಂವಿಧಾನದ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯಸರ್ಕಾರ ಜನವರಿ 26 ರಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮ ಇಂದು ಉಚ್ವಂಗಿ ಗ್ರಾಮ ಪಂಚಾಯಿತಿಗೆ ತಲುಪಿದ್ದು ಜಾಥಾವನ್ನು ಗ್ರಾಮ ಪಂಚಾಯಿತಿ ಅದ್ಯಕ್ಷರು ,ಉಪಾದ್ಯಕ್ಷರು, ಸದಸ್ಯರು ಜನಪ್ರತಿನಿದಿಗಳು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಬರಮಾಡಿಕೊಂಡರು.

ಮಹಿಳೆಯರು ಪೂರ್ಣಕುಂಭ ಸ್ವಾಗತದೊಂದಿಗೆ ಅಂಬೇಡ್ಕರ್ ಪ್ರತಿಮೆಯನ್ನು ಹೊತ್ತು ಸಾಗಿಬಂದ ರಥಕ್ಕೆ ಅದ್ದೂರಿಯಾಗಿ ಸ್ವಾಗತಿಸಿದರು

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಊರಿನ ಪ್ರಮುಖರು ಸಂಘ ಸಂಸ್ಥೆಗಳ ಮುಖಂಡರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *