ಚನ್ನರಾಯಪಟ್ಟಣ : ಸವಿತಾ ಸಮಾಜ ಶೈಕ್ಷಣಿಕವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಎಲ್ಲ ರಂಗದಲ್ಲೂ ತನ್ನದೇ ಆದ ಕೊಡುಗೆ ನೀಡಿದೆ ಎಂದು ತಹಶೀಲ್ದಾರ್ ಬಿ.ಎಮ್.ಗೋವಿಂದರಾಜು ಅಭಿಪ್ರಾಯ ಪಟ್ಟರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ನ್ಯೂ ಸವಿತ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದ ಅವರು ಸವಿತಾ ಸಮಾಜ ಎಲ್ಲಾ ವರ್ಗದ ಜನರಿಗೂ ತಾತರಮ್ಯವಿಲ್ಲದೆ ಸೇವೆ ನೀಡುತ್ತಿದೆ.

ಹಾಗಾಗಿ ಸಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಈ ಸಮುದಾಯ ಸದೃಡವಾಗಬೇಕಿದೆ, ಸವಿತಾ ಸಮಾಜ ಶುಭಕಾರ್ಯಗಳಿಗೆ ಮುಂದಿರುತ್ತದೆ, ಸವಿತಾ ಸಮಾಜ ಸಂಘಟಿತರಾಗುವ ಮೂಲಕ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು.

ಪ್ರತಿಯೊಂದು ಸಮುದಾಯವನ್ನು ಗೌರವಿಸಿ ಅದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವ ನಿಟ್ಟಿನಲ್ಲಿ ಸರ್ಕಾರ ಜಯಂತಿಗಳನ್ನು ಆಚರಿಸುವ ಸತ್ಕಾರ್ಯಗಳನ್ನು ನಡೆಸಿದೆ. ಮಹಾನ್‌ ವ್ಯಕ್ತಿಗಳ ತತ್ವ-ಸಂದೇಶಗಳು ಸರ್ವಕಾಲಿಕವಾಗಿದ್ದು, ಅದರ ಹಲವು ಭಾಗವನ್ನಾದರೂ ಜನರು ಜೀವನದಲ್ಲಿ ಅಳವಡಿಸಿಕೊಂಡಾಗ, ಉತ್ತಮ ಸಮಾಜ ನಿರ್ಮಾಣದೊಂದಿಗೆ ಸದೃಢ ಭಾರತ ಹೊರಹೊಮ್ಮಲು ಸಾಧ್ಯ.

ಗುರುಗಳ ಹಾದಿಯಲ್ಲಿ ಸಾಗಿ ಆಚಾರ-ವಿಚಾರ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸತ್ಪ್ರಜೆಗಳಾಗಬಹುದು ಎಂದರು.ಪ್ರತಿಯೊಂದು ಸಮಾಜವು ಶಿಕ್ಷಣಕ್ಕೆ ಒತ್ತು ನೀಡಬೇಕು. ಶಿಕ್ಷಣದಿಂದ ಸ್ವಾವಲಂಬಿ ಬದುಕಿನೊಂದಿಗೆ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಿದೆ. ಪ್ರತಿಯೊಬ್ಬಯೊಬ್ಬರೂ ತಾವು ಮಾಡುವ ಕಸುಬಿನ ಮೇಲೆ ಗೌರವ, ನಿಷ್ಠೆ ಇಟ್ಟುಕೊಂಡಾಗ ಬದುಕಿನಲ್ಲಿ ಉತ್ತುಂಗಕ್ಕೇರಲು ಸಾಧ್ಯವಿದೆ’ ಎಂದು ತಿಳಿಸಿದರು.

ಜಯಂತೋತ್ಸವದಲ್ಲಿ ನ್ಯೂ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಲೋಹಿತ್, ಗೌರವಾಧ್ಯಕ್ಷ ಡಿಶ್ ಕುಮಾರ್ ,ಕಾರ್ಯದರ್ಶಿ ಗಣೇಶ್ ಪ್ರತಿನಿಧಿ ಸಿ.ಆರ್.ಕುಮಾರ್, ಗೌರವ ಸಲಹೆಗಾರರು ಎ.ಪಿ.ದೇವರಾಜ್, ಎಸ್ ವಿ ಆನಂದ್ , ಖಜಾಂಚಿ ಗೋಪಾಲ್, ಸಹ ಕಾರ್ಯದರ್ಶಿ ಬಸವರಾಜ್, ಸಂಚಾಲಕ ಶೇಖರ್, ತಾಲೂಕು ಹಾಗೂ ಹೋಬಳಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *