ಆಲೂರು: ತಾಲೂಕಿನ ಕೆ. ಹೊಸಕೋಟೆ ಹೋಬಳಿಯ ಅಬ್ಬನ ಗ್ರಾಮ ಪಂಚಾಯಿತಿಯ ಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಣ್ಣಪ್ಪ ಪೂಜಾರಿ , ಉಪಾಧ್ಯಕ್ಷರಾಗಿ ಪೂರ್ಣಿಮಾ ಅವಿರೋಧವಾಗಿ ಆಯ್ಕೆಯಾದರೂ.ಅಬ್ಬನ ಗ್ರಾಮ ಪಂಚಾಯಿತಿ ಒಟ್ಟು 8 ಜನ ಸದಸ್ಯ ಬಲ ಹೊಂದಿದ್ದು ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗಾಗಿ ನಡೆದ ಚುನಾವಣೆಯಲ್ಲಿ ಎಲ್ಲಾ ಸದಸ್ಯರು ಚುನಾವಣೆಯಲ್ಲಿ ಭಾಗಿಯಾಗಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರು.

ಚುನಾವಣಾ ಅಧಿಕಾರಿಯಾಗಿ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಗಿರೀಶ್ ಚುನಾವಣಾ ಕಾರ್ಯನಿರ್ವಹಿಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಧಿಕೃತವಾಗಿ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಅಣ್ಣಪ್ಪ ಪೂಜಾರಿ ಅಧಿಕಾರ ಸ್ವೀಕರಿಸಿ ಪತ್ರಿಕೆಯೊಂದಿಗೆ ಮಾತನಾಡಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಾಗಿ ಹಗಲಿರಲು ಶ್ರಮಿಸಿ ಗ್ರಾಮಗಳ ಅಭಿವೃದ್ಧಿ ಪಡಿಸುತ್ತೇವೆ. ನನ್ನನ್ನ ಗ್ರಾಮ ಪಂಚಾಯತಿ ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರುಗಳಿಗೂ, ಹಾಗೂ ಪಕ್ಷದ ಎಲ್ಲಾ ಹಿರಿಯ ಮುಖಂಡರುಗಳಿಗೆ ಕಾರ್ಯಕರ್ತರುಗಳಿಗೆ ಧನ್ಯವಾದ ತಿಳಿಸಿದರು.

ಶಾಸಕ ಸಿಮೆಂಟ್ ಮಂಜು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಅಭಿನಂದಿಸಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆ ಮಾಡಿಕೊಂಡರು.

ನಂತರ ಬಿಜೆಪಿ ಯುವ ಮುಖಂಡ ಸಮಾಜ ಸೇವಕ ಕಟ್ಟೆ ಗದ್ದೆ ನಾಗರಾಜ್ ಮಾತನಾಡಿ ಅಣ್ಣಪ್ಪ ಪೂಜಾರಿ ಅವರು ಅಬ್ಬನ ಗ್ರಾಮ ಪಂಚಾಯತಿಯಲ್ಲಿ ಸದಸ್ಯರಾಗಿ ನಂತರ ಉಪಾಧ್ಯಕ್ಷರಾಗಿ, ಜನಪ್ರಿಯತೆ ಹೊಂದಿ ಉತ್ತಮ ನಾಯಕತ್ವ ಬೆಳೆಸಿಕೊಂಡು ಇಂದು ಅಬ್ಬನ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿರುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ.

ನಮ್ಮೆಲ್ಲರ ಹೆಮ್ಮೆಯ ಶಾಸಕರು ಸಿಮೆಂಟ್ ಮಂಜಣ್ಣ ಅವರ ನಾಯಕತ್ವವನ್ನು ಒಪ್ಪಿ, ಅವರ ಜನಪ್ರಿಯತೆ, ಜನಪರ ಕೆಲಸಗಳನ್ನು ಮೆಚ್ಚಿ ಇವತ್ತು ಅಣ್ಣಪ್ಪ ಪೂಜಾರಿ ಅವರು ನಾವು ನಿಮ್ಮ ಜನಪ್ರಿಯ ಕೆಲಸಗಳಿಗೆ ಬೆಂಬಲ ಕೊಡುತ್ತೇವೆ ಎಂದು ಮತ್ತು ಈ ದೇಶದ ಭವಿಷ್ಯಕ್ಕಾಗಿ ನರೇಂದ್ರ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿ ಮಾಡಲು ನಾವು ನಿಮ್ಮ ಜೊತೆ ಕೈಜೋಡಿಸುತ್ತೇವೆ ಎಂದು ಇಂದು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾಗಿರುವುದು ಸಂತೋಷ ತಂದಿದೆ ಎಂದರು.

ಬಿಜೆಪಿ ಯುವ ಮುಖಂಡ ಸಮಾಜ ಸೇವಕ ಕಟ್ಟಡ ನಾಗರಾಜ್, ಮಲ್ಲಾಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷ, ಕೃಷ್ಣಪ್ಪ, ಸದಸ್ಯ ಚಂದನ್ ಹೈದೋರು, ಭುವನೇಶ್,ಅಶೋಕ್, ಅಬ್ಬನ ಗ್ರಾಮ ಪಂಚಾಯಿತಿಯ ಸದಸ್ಯರುಗಳಾದ ರವಿ, ಬಿಜೆಪಿ ಮುಖಂಡ ಚೇತನ್, ಇನ್ನಿತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *