ಬೇಲೂರಿನಿಂದ ಚಿಕ್ಕಮಗಳೂರಿಗೆ ತೆರಳಲು ಬಸ್‌‌ಗಳು ಇಲ್ಲದ ಕಾರಣ ನೂರಾರು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಎಲ್ಲಾ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಬೇಲೂರು ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಪ್ರತಿನಿತ್ಯ ಬೇಲೂರಿನಿಂದ ಚಿಕ್ಕಮಗಳೂರಿಗೆ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ತೆರಳುತ್ತಿದ್ದು, ಒಂದು ವಾರದಿಂದ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಚಿಕ್ಕಮಗಳೂರಿಗೆ ಯಾವುದೇ ಬಸ್‌ಗಳಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೆ‌ಎಸ್‌ಆರ್‌ಟಿಸಿ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳುಯಾವುದೇ ಕ್ರಮ ಕೈಗೊಂಡಿಲ್ಲ.

ಇಂದು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್‌ನಲ್ಸ್ ಎಕ್ಸಾಂ ಇದ್ದು, ಬಸ್ ಇಲ್ಲದ್ದಿದ್ದರಿಂದ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಎಲ್ಲಾ ಮಾರ್ಗದ ಬಸ್‌ಗಳನ್ನು ತಡೆದು ಕೆಲಕಾಲ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಪ್ರತಿಭಟನೆ ವಿಷಯ ತಿಳಿದ ಸ್ಥಳೀಯ ಶಾಸಕ ಎಚ್.ಕೆ.ಸುರೇಶ್ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ಕರೆ ಮಾಡಿ ಪ್ರತಿಭಟನಾ ಸ್ಥಳಕ್ಕೆ ತೆರಳಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು, ಅಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬಾರದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed