ಕಳೆದ 10 ದಿನಗಳ ಹಿಂದೆ ಸಕಲೇಶಪುರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪತ್ರ ಸದಸ್ಯರಾದ ಜಮೀಲ್ ರವರ ಎರಡನೇ ಮಗಳಿಗೆ ಶಸ್ತ್ರ ಚಿಕಿತ್ಸೆ ಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿರುತ್ತಾರೆ. ಇದಾದ ನಂತರ ತಾಯಿಗೆ ರಕ್ತಸಾವ್ರ ನಿಲ್ಲದ ಕಾರಣ ಹಾಸನದ ಜಿಲ್ಲಾಸ್ಪತ್ರೆಗೆ ಕಳುಹಿಸಿರುತ್ತಾರೆ. ಅಲ್ಲೂ ಸಹ ಚಿಕಿತ್ಸೆ ಸರಿಯಾಗದೆ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು ಆಕೆ ಸಾವು ಬದುಕಿನ ನಡುವೆ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ವೈದ್ಯರ ನಡುವಿನ ಆಂತರಿಕ ಜಟಾಪಟಿ ಈ ಸಮಸ್ಯೆಯಾಗಲು ಕಾರಣ ಎಂಬ ಅನುಮಾನ ದಟ್ಟವಾಗಿದ್ದು ಪತ್ರಕರ್ತರ ಕುಟುಂಬಕ್ಕೆ ಈ ರೀತಿಯಾದರೆ ಇನ್ನು ಜನಸಾಮಾನ್ಯರಿಗೆ ಯಾವ ರೀತಿ ನ್ಯಾಯ ದೊರಕಬಹುದೆಂಬ ಪ್ರಶ್ನೆ ಕಾಡುತ್ತಿದೆ. ಮಗಳ ಜೀವ ಉಳಿಸಿಕೊಳ್ಳಲು ಲಕ್ಷಾಂತರ ರೂ ಬಿಲ್ ಪಾವತಿ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಕ್ರಾಫರ್ಡ್ ಆಸ್ಪತ್ರೆ ವ್ಯವಸ್ಥೆ ಬದಲಾಯಿಸಲು ಸಂಬಂದ ಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿದಿಗಳು ಮುಂದಾಗಬೇಕಾಗಿದ್ದು ಈ ಹಿನ್ನಲೆಯಲ್ಲಿ ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜು ಅವರು ಇಂದು ಮೈಸೂರಿನ ಆಸ್ಪತ್ರೆಗೆ ಬೇಟಿ ನೀಡಿ ಅವರ ಅರೋಗ್ಯ ವಿಚಾರಿಸಿ ದೈರ್ಯ ತುಂಬಿದರು.

ಇನ್ನಾದರೂ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿ ನಿದಿಗಳು ಇತ್ತ ಗಮನ ಹರಿಸಬೇಕು ಎಂಬುದು TV 46 ನ ಕಳಕಳಿಯಾಗಿದೆ..

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *