ಆಲೂರು : ತಾಲೂಕಿನ ಕೆ. ಹೊಸಕೋಟೆ ಮತ್ತು ಕುಂದೂರು ಎರಡು ಹೋಬಳಿಗಳ ಧಾರ್ಮಿಕ ಸಂಬಂಧ ಬೆಸೆಯುವ ಅಡಿಬೈಲು ಗ್ರಾಮದ ರಂಗನಬೆಟ್ಟದ ಐತಿಹಾಸಿಕ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ.

ಅರ್ಚಕರು ನಾರಾಯಣಸ್ವಾಮಿ ಮಾತನಾಡಿ ರಂಗನಾಥ ಸ್ವಾಮಿ ಬೆಟ್ಟದ ವೈಶಿಷ್ಟತೆ! ಇತಿಹಾಸ ಹೇಳುವಂತೆ ಒಬ್ಬ ಕೊರಮನು ಬುಟ್ಟಿ ಹೆಣೆಯಲು ಬಿದಿರು ತರಲು ಹೋಗಿದ್ದನು. ಬಿದಿರಿನ ಗುಂಪಂದಕ್ಕೆ ಕತ್ತಿಯನ್ನು ಹೊಡೆಯುವಾಗ ಆಯತಪ್ಪಿ ಏಟು ಬಿದ್ದು ಬಂಡೆಗೆ ತಾಗುತ್ತದೆ. ಆ ಬಂಡೆಯಿಂದ ಒಂದು ಬದಿಯಲ್ಲಿ ಹಾಲು ಮತ್ತೊಂದು ಬದಿಯಲ್ಲಿ ರಕ್ತ ಬರುತ್ತದೆ. ಇದರಿಂದ ಗಾಬರಿಯಾದ ಅವನು ಪ್ರಜ್ಞೆ ತಪ್ಪಿ ಬೀಳುವನು. ಮನೆಗೆ ವಾಪಾಸು ಬಾರದ ಈತನನ್ನು ಮನೆಯವರು ಹುಡುಕಿಕೊಂಡು ಹೋದರು. ಪ್ರಜ್ಞೆಬಂದ ವ್ಯಕ್ತಿಯು ನಡೆದ ವಿಷಯವನ್ನು ತಿಳಿಸುತ್ತಾನೆ. ಸ್ಥಳವನ್ನು ಗಮನಿಸಿದಾಗ ಬ್ರಹ್ಮದೇವನ ವಿಗ್ರಹ ಪತ್ತೆಯಾಗುತ್ತದೆ. ಆ ಉದ್ಭವ ಮೂರ್ತಿಯನ್ನು ಪಾಳೆಗಾರರಿಂದ ರಕ್ಷೆ ಸಲೆಂದು ವಿಷ್ಣುವರ್ಧನ ರಾಜನು ದೇವಾಲಯವನ್ನು ನಿರ್ಮಾಣ ಮಾಡಿಸುತ್ತಾನೆ. ಹೊಯ್ಸಳ ದೊರೆ ವಿಷ್ಣುವರ್ಧನ ಜೈನ ಧರ್ಮದಿಂದ ವೈಷ್ಣವ ಧರ್ಮಕ್ಕೆ ಮತಾಂತರ ಹೊಂದಿದ್ದರಿಂದ ಬ್ರಹ್ಮದೇವನನ್ನೆ ರಂಗನಾಥನೆಂಬ ಹೆಸರಿನಿಂದ ಕರೆಯಲಾರಂಭಿಸಿದರು ಎನ್ನಲಾಗಿದೆ.

ದೇವಸ್ಥಾನ ಸಮಿತಿಯ ಅಧ್ಯಕ್ಷರು ಉಮೇಶ್ ಗೌಡ್ರು ಮಾತನಾಡಿಕೆಂಚಮ್ಮನ ಹೊಸಕೋಟೆ ಮತ್ತು ಕುಂದೂರು ಹೋಬಳಿಗೆ ಸೇರಿದ ಸುಮಾರು 48 ಹಳ್ಳಿಗಳಿಗೆ ಸಂಬಂಧಿಸಿದ ಈ ಜಾತ್ರೆ ಸಂಕ್ರಾಂತಿ ಹಬ್ಬ ದಿನದಿಂದಲೆ ಪ್ರಾರಂಭವಾಗುತ್ತದೆ. ಸಂಕ್ರಾಂತಿ ಹಬ್ಬದ ದಿನದಂದು ಕುಂದೂರು ಹೋಬಳಿ ವ್ಯಾಪ್ತಿಗೊಳಪುಡುವ ಸುಮಾರು 20 ಗ್ರಾಮಗಳಿಗೆ ಅಡ್ಡೆ ದೇವರು ಹೋಗುತ್ತದೆ. ಉತ್ಸವ ಮುಗಿದ ನಂತರ ಜಾತ್ರೆ ನಡೆಯುವ ಏಳು ದಿನಗಳ ಮೊದಲು ಬೆಟ್ಟದಲ್ಲಿರುವ ದೇವಾಲಯಕ್ಕೆ ಕರೆತರಲಾಗುತ್ತದೆ. ಮೊದಲ ದಿನ ಶನಿವಾರ ದೊಡ್ಡ ಹರಿಸೇವೆ. ಭಾನುವಾರ, ಸೋಮವಾರ ಹಕ್ಕಿನ ಉತ್ಸವ ನಡೆಯುತ್ತದೆ. ಮಂಗಳವಾರ ಬಿಂದಿಗಮ್ಮ ಕಳಸ ಹೊರುವ ಪೂಜಾರಿಯವರಿಗೆ ತಲೆ ಬೋಳಿಸಿ, ಹಸೆ ಹಾಕಿ ಕಾಸೆ ವೇಷದೊಂದಿಗೆ ದೇವಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ.

ಇವರು ಜಾತ್ರಾ ಮಹೋತ್ಸವ ಮುಗಿಯುವವರೆಗೂ ಹಣ್ಣ-ಹಂಪಲು ಬಿಟ್ಟರೆ ಬೇರೆನನ್ನೂ ಸೇವಿಸದೆ ಪೂಜಾ ಕೈಂಕರ್ಯದಲ್ಲಿ ತೊಡಗುತ್ತಾರೆ.ಗ್ರಾಮದ ಮುಖಂಡರು ತನುಗೌಡ್ರು ಮಾತನಾಡಿ ಶ್ರೀ ರಂಗನಾಥಸ್ವಾಮಿಗೂ ಬಿಂದಿಗಮ್ಮನಿಗೂ ಮದುವೆ ಮಾಡಿ ಆ ವೈಭವವನ್ನು ಆನಂದಿಸುವುದು ಈ ಜಾತ್ರೆಯ ವಿಶೇಷವಾಗಿದೆ. ದೇವಾಲಯದಲ್ಲಿ ಗುರುವಾರ ರಾತ್ರಿ ಬಿಂದಿಗಮ್ಮನವರಿಗೆ ಹಸೆ ಹಾಕುವ ವಿಶೇಷ ಪೂಜೆ ಇರುತ್ತದೆ. ಶುಕ್ರವಾರ ರಾತ್ರಿ ಗಂಡನ ಕಡೆ ಊರಾದ ಭರತೂರಿನ ಹೊಳೆ ದಡಕ್ಕೆ ಉತ್ಸವ ಮೂರ್ತಿಯೊಂದಿಗೆ ಬಿಂದಿಗಮ್ಮನವರನ್ನು ಕರೆ ತರಲಾಗುವುದು.

ಶನಿವಾರ ಹೊಳೆ ದಡದಲ್ಲಿ ಜಾತ್ರೆ ನಡೆಯುತ್ತದೆ. ಸಂಜೆ ಬಿಂದಿಗಮ್ಮನವರನ್ನು ಗಂಡನ ಮನೆಗೆ ಅಂದರೆ ರಂಗನಾಥಸ್ವಾಮಿ ದೇವಾಲಯಕ್ಕೆ ಕಳುಹಿಸುವ ಸಂದರ್ಭ ನೋಡಲೇಬೇಕಾದುದು. ಕಳಸ ಹೊರಡುವ ಮುನ್ನ ಕುಂದೂರಿನ ಗ್ರಾಮಸ್ಥರನ್ನು ಭರತೂರು ಗ್ರಾಮಸ್ಥರು ಬರಮಾಡಿಕೊಂಡು ವಿಶೇಷ ಆತಿಥ್ಯ ನೀಡಿ ಗೌರವಿಸುತ್ತಾರೆ. ಹೂವು ತುಳಸಿಯಿಂದ ಅಲಂಕೃತವಾದ ಹರಿವಾಣದಲ್ಲಿ ಬಿಂದಿಗಮ್ಮನವರ ಕಳಸವನ್ನು ತಲೆ ಬೋಳಿಸಿದ್ದ ಪೂಜಾರಿ ತಲೆ ಮೇಲೆ ಇಡಲಾಗುತ್ತದೆ. ಸ್ವಲ್ಪ ದೂರ ನಿಧಾನವಾಗಿ ನಡೆದು ಹೋಗುತ್ತಿದ್ದ ಕಳಸ ಹೊತ್ತವರು, ನಂತರದಲ್ಲಿ ತಲೆ ಮೇಲಿರುವ ಕಳಸವನ್ನು ಕೈಯಲ್ಲಿ ಹಿಡಿಯದೆ ಓಡಲು ಪ್ರಾರಂಭ ಮಾಡುತ್ತದೆ. ಹೊಳೆಯಿಂದ ಸುಮಾರು 10 ಕಿ. ಮೀ. ದೂರದ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಏಳು ಊರುಬಾಗಿಲಗಳನ್ನು ದಾಟಿಕೊಂಡು ಕೇವಲ ಮುಕ್ಕಾಲು ಗಂಟೆಯಲ್ಲಿ ತಲುಪುತ್ತದೆ ಊರು ಬಾಗಿಲಲ್ಲಿ ಅಕ್ಕಿ ಹಸೆ ಬರೆದು ಹಣ ಹಾಕಿರುತ್ತಾರೆ

ಬಾಗಿಲು ದಾಟುವ ಸಂದರ್ಭದಲ್ಲಿ ಕಳಸ ಹೊತ್ತವರು ತನ್ನ ಗದ್ದದಿಂದ ನೆಲದ ಮೇಲಿಟ್ಟ ಹಣವನ್ನು ಮುಟ್ಟುತ್ತಾರೆ. ಕಳಸ ಮುಂದೆ ಹೋದ ಕೂಡಲೆ ನೆರೆದಿದ್ದವರು ಹಸೆ ಅಕ್ಕಿಯನ್ನು ಮುಗಿಬಿದ್ದು ತೆಗೆದುಕೊಳ್ಳುತ್ತಾರೆ ಈ ಸಂದರ್ಭ ನೋಡಲು ಅತ್ಯಂತ ಕುತೂಹಲಕಾರಿಯಾಗಿರುತ್ತದೆ. ಭಾನುವಾರ ಬೆಟ್ಟದ ಮೇಲೆ ಹಗಲು ಜಾತ್ರೆ ನಡೆಯುತ್ತದೆ. ಸೋಮವಾರ ಹೇಮಾವತಿ ನದಿ ನೀರಿನಿಂದ ಅಭಿಷೇಕದೊಂದಿಗೆ ಜಾತ್ರಾ ವಿಶೇಷ ಪೂಜಾ ಕಾರ್ಯಕ್ಕೆ ನಾಂದಿ ಹಾಡಲಾಗುತ್ತದೆ.

ನಂತರ ಉಗಾದಿ ಹಬ್ಬದ ಸಂದರ್ಭದಲ್ಲಿ ಭರತೂರು ಕಡೆಗೆ ಸೇರುವ ಸುಮಾರು 10 ಗ್ರಾಮಗಳಲ್ಲಿ ಅಡ್ಡೆ ಉತ್ಸವ ನಡೆಯುತ್ತದೆ. ಬಿಜೆಪಿ ಯುವ ಮುಖಂಡ ಸಮಾಜ ಸೇವಕ ಕಟಕದ್ದೆ ನಾಗರಾಜ್ ಮಾತನಾಡಿಮುಜರಾಯಿ ಇಲಾಖೆಗೆ ಸೇರಿದ ಅಡಿಬೈಲು ಶ್ರೀ ರಂಗನಾಥಸ್ವಾಮಿ ದೇವರ ಜಾತ್ರೆ ಭರತೂರು ಹೊಳೆ ಬದಿಯಲ್ಲಿನೆನ್ನೆ ನಡೆದು ಇಂದು ಬೆಟ್ಟದ ಮೇಲೆ ನಡೆಯುತ್ತದೆ. ರಂಗನಾಥ ಸ್ವಾಮಿ ದೇವರು ಸಾವಿರಾರು ಸಂಖ್ಯೆಯ ಜನರ ಮನೆದೇವರಾಗಿದ್ದು ಬೇಡಿ ಬಂದ ಭಕ್ತರನ್ನು ಎಂದಿಗೂ ಕೈ ಬಿಡದೆ ಅವರ ಇಷ್ಟಾರ್ಥಗಳನ್ನು ಈಡೇರಿಸುವಂತಹ ಶಕ್ತಿ ರಂಗನಾಥ ಸ್ವಾಮಿಯರದು.

ದೇವಸ್ಥಾನದ ಸಮಿತಿಯ ಸದಸ್ಯರುಗಳಾದ ಕಾರ್ತಿಕ್ ಮಾದಿಹಳ್ಳಿ, ಪುಟ್ಟರಾಜು, ಯತೀಶ್, ಭೋಗೇಶ್ ಕುಂದೂರು, ಪುಟ್ಟರಂಗ ಸ್ವಾಮಿ ಕಲ್ಲಾರೆ ಉಪಸ್ಥಿತರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *