ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್ ಕೊನೆಯ ವಾರದಲ್ಲಿ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಸಾಹಿತ್ಯ ಪರಿಷತ್ತು ಅದ್ಯಕ್ಷರಾದ ಡಾ. ಮಲ್ಲೇಶಗೌಡ ಅವರು ತಿಳಿಸಿದ್ದಾರೆ.

ಬುಧವಾರ ಸಂಜೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿಯಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಮಾರ್ಚ್ ಕೊನೆಯ ವಾರದಲ್ಲಿ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನವನ್ನು ನಡೆಸುವ ಉದ್ದೇಶದಿಂದ ಪೂರ್ವಬಾವಿಯಾಗಿ ನಾಳೆ ಅಂದರೆ ಗುರುವಾರ ದಿನಾಂಕ 29 -2-2024 ರಂದು ಬೆಳಗ್ಗೆ 11 ಘಂಟೆಗೆ ಹೆತ್ತೂರಿನ ಬೆಳೆಗಾರರ ಸಂಘದಲ್ಲಿ ಸಭೆಯನ್ನು ಕರೆಯಲಾಗಿದ್ದು ಈ ಸಭೆಗೆ ತಾಲೂಕಿನ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಹಾಗೂ ಹೋಬಳಿ ಪದಾಧಿಕಾರಿಗಳು ಹಿರಿಯ ಸಾಹಿತಿಗಳು ಕನ್ನಡ ಪರ ಸಂಘಟನೆಗಳ ಮುಖಂಡರು ಬಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆ ಹಾಗೂ ಸಹಕಾರವನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *