ಸಕಲೇಶಪುರ : ತಾಲ್ಲೂಕ್ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ದಿನದ ಪ್ರಯುಕ್ತ “ವಿಜ್ಞಾನ ವಸ್ತು ಪ್ರದರ್ಶನ ” ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ರಾದ ಶ್ರೀ ಸಚಿನ್ ರವರು ಉದ್ಘಾಟಿಸಿದರು.

ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ” ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಲ್ಲದೆ, ವಿಜ್ಞಾನದ ವಸ್ತು ಪ್ರದರ್ಶನ ಕಾರ್ಯಕ್ರಮವು ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಕಲ್ಪಿಸುತ್ತದೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಪ್ರಸ್ತುತ ಸಮಾಜದಲ್ಲಿ ಅಗತ್ಯವಾಗಿದೆ. ಇಂತಹ ಅವಕಾಶವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಉಪಯೋಗಿಸಿಕೊಳ್ಳವುದರ ಜೊತೆಗೆ ಮುಂದಿನ ವಿದ್ಯಾಭ್ಯಾಸಕ್ಕೂ ಇದು ದಾರಿದೀಪವಾಗಲಿ.” ಎಂದು ಹೇಳಿದರು.

ವಿದ್ಯಾರ್ಥಿಗಳಿಂದ ಹೊಸ ಹೊಸ ವಿಜ್ಞಾನದ ಅವಿಷ್ಕಾರಗಳ ಮಾಡಲ್ ಗಳು ನೆರೆದಿದ್ದ ಪೋಷಕರ ಗಮನ ಸೆಳೆದವು. ಅಂಗವಿಕಲರಿಗೆ ಅನುಕೂಲವಾಗುವಂತಹ ಸ್ವಯಂಚಾಲಿತ ಶೌಚಾಲಯದ ಮಾಡೆಲ್ ಎಲ್ಲರ ಗಮನ ಸೆಳೆಯಿತು.

ಶಾಲೆಯ ಈ ವಿನೂತನ ಕಾರ್ಯಕ್ರಮ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ವಿಜ್ಞಾನದ ವಿಶೇಷ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಯಾಗಿ ಅವಕಾಶ ಕಲ್ಪಿಸಿಕೊಟ್ಟಿತು.

ವೇದಿಕೆಯಲ್ಲಿದ್ದ ಉಪ ಪ್ರಾಂಶುಪಾಲರಾದ ಭಾಸ್ಕರ್ ಸರ್ ರವರು ಮಕ್ಕಳು ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡ ಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹೆತ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ನಾಗರಾಜ್ ಮುಖ್ಯೋಪಾಧ್ಯಾಯರಾದ ಸತೀಶ್ ಸರ್ ಹಾಗೂ ಶಾಲಾಭಿವೃದ್ದಿ ಸಮಿತಿಯ ಸದಸ್ಯರುಗಳಾದ ಕರಡಿಗಾಲ ಹರೀಶ, ವನಗೂರ್ ಶರತ್ ಹಾಗೂ ಇತರ ಎಲ್ಲಾ ಸದಸ್ಯರುಗಳು ಮತ್ತು ಶಾಲಾ ಶಿಕ್ಷಕರುಗಳು ಪೋಷಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *