ಮಲೆನಾಡಿನ ರೈತರನ್ನು ಜೀವಭಯದಲ್ಲಿರಿಸಿರುವ ಕಾಡಾನೆ ‘ಕರಡಿ’ ಕೂಲಿ ಕೆಲಸಗಾರನ ಮೇಲೆ ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಆತ ಪಾರಾದ ಘಟನೆ ಸಕಲೇಶಪುರ ತಾಲ್ಲೂಕಿನ, ಕೆಸಗುಲಿ ಗ್ರಾಮದ ಪಿಂಟು ಎಸ್ಟೇಟ್‌ನ ಅಡಿಕೆ ತೋಟದಲ್ಲಿ ನಡೆದಿದೆ.

ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಕೆಲಸ ಮಾಡುತ್ತಿದ್ದ ಇಬ್ಬರು ಕೂಲಿ ಕಾರ್ಮಿಕರ ಗಮನಕ್ಕೆ ಬಾರದಂತೆ ಸಮೀಪಿಸಿದ ಆನೆಯು ಏಕಾಏಕಿ ದಾಳಿ ನಡೆದಿದೆ. ತಕ್ಷಣ ಎಚ್ಚೆತ್ತ ಕೆಲಸಗಾರರು ಓಡಿದ್ದಾರೆ. ಅವರಲ್ಲಿ ಒಬ್ಬನ ಬೆನ್ನು ಹತ್ತಿದ ಆನೆ ಬೀಸಿದ ಸೊಂಡಲಿನಿಂದ ಒಬ್ಬಾತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.

ನಂತರ ಇನ್ನೊಬ್ಬನ‌ ಮೇಲೆ ದಾಳಿ‌ ಮಾಡಿದ ಆನೆಯು ಆತನನ್ನು ಅಟ್ಟಿಸಿಕೊಂಡು ಹೋಗಿದೆ. ಆತ ಓಡಿ ಮನೆಯೊಳಗೆ ಹೋಗಿ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗೆ ಹೋಗಿ ಮಲಗಿ ಪಾರಾಗಿದ್ದಾನೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *