2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು.ಇದೀಗ ಹೈಕೋರ್ಟ್​​ ಈ ಬೋರ್ಡ್​​ ಪರೀಕ್ಷೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು, ಮಾರ್ಚ್​ 06: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ (Schools) 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು (Board Exam) ರದ್ದು ಮಾಡಿ ಹೈಕೋರ್ಟ್​ (High Court) ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *