ಸಕಲೇಶಪುರ : ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ತಾನು ಹೇಳಿದಂತೆ ಕೇಳಬೇಕೆಂದು ಕೃಷಿ ಅಧಿಕಾರಿಯೊಬ್ಬರಿಗೆ ಧಮಕಿ ಹಾಕಿರುವ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕಿನ ವಿವಿಧ ದಲಿತ ಸಂಘಟನೆಗಳು ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಹೊಳೆ ಮಲ್ಲೇಶ್ವರ ದೇವಾಲಯದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಕಲೇಶಪುರದ ಹಳೆ ಬಸ್ ನಿಲ್ದಾಣ ಮೂಲಕ ಸಾಗಿ ಉಪ ವಿಭಾಗಾಧಿಕಾರಿಗಳಿಗೆ ಇವರನ್ನು ತಾಲೂಕಿನಿಂದ ಗಡಿಪಾರು ಮಾಡಬೇಕೆಂದು ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸ್ಟೀವನ್ ಪ್ರಕಾಶ್,ವಳಲಹಳ್ಳಿ ವೀರೇಶ್, ಹೆತ್ತೂರು ದೊಡ್ಡಯ್ಯ ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *