
ಆಲೂರು : ಪಟ್ಟಣದ ಡಾ, ಬಿ, ಆರ್,ಅಂಬೇಡ್ಕರ್ ಭವನದಲ್ಲಿ ಕಾಂಗ್ರೆಸ್ ಪಕ್ಷದ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ತಾಲ್ಲೂಕು ಅಧ್ಯಕ್ಷ ಅಜ್ಜೇನಹಳ್ಳಿ ಲೋಕೇಶ್ ಮಾತಾನಾಡಿ ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿ ರಾಜ್ಯಾದ್ಯಂತ ಆಗುತ್ತಿರುವ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಕ್ಷ ತೊರೆದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಷಯ.
ಕಾರ್ಯ ಕರ್ತರು ನಿಷ್ಠೆಯಿಂದ ಕೆಲಸ ಮಾಡಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೇಯಸ್ ಪಟೇಲ್ ರವರನ್ನು ಗೆಲ್ಲಿಸಿ ಮುಂದೆ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಜನರಿಗೆ ಯಾವುದೇ ಕೆಲಸಗಳು ಆಗಿಲ್ಲ. ಸುಳ್ಳು ಹೇಳಿ ಜನರಿಗೆ ದಾರಿ ತಪ್ಪಿಸುವ ಕೆಲಸ ಮಾಡುವುದೇ ಬಿಜೆಪಿ ಪಕ್ಷದ ಕೆಲಸವಾಗಿದೆ.
ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಬಿಜೆಪಿ ಪಕ್ಷದವರು ಸಹಿಸಿಕೊಳ್ಳುತ್ತಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು ಇಂದು ಎಲ್ಲರೂ ಸಮಾನವಾಗಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಈ ದೇಶದ ಆಡಳಿತ ಆಳಿದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷ ಅಂತಹ ಪಕ್ಷ ಸಿದ್ಧಾಂತಗಳನ್ನು ಒಪ್ಪಿ ಸೇರ್ಪಡೆಯಾದಂಥಹ ಎಲ್ಲರಿಗೂ ಬೆಂಬಲಸೂಚಿಸುತ್ತೇನೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನಗಳನ್ನು ಸೇರಿಸಿ ಪಕ್ಷವನ್ನು ಬಲಪಡಿಸಬೇಕು ಜೋತೆಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ದಿಸುತ್ತಿರುವ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಕಾರ ಮಾಡಬೇಕೆಂದರು,,
ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಂತಕೃಷ್ಣ ಮಾತಾನಾಡಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಬೇರೆ ಪಕ್ಷ ತೊರೆದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ನಮಗೆ ದೊಡ್ಡ ಶಕ್ತಿ ಬಂದಂತಾಗಿದೆ ಲೋಕಸಭಾ ಚುನಾವಣೆ ಈಗಾಗಲೇ ಸಮೀಪಸುತ್ತಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷದಿಂದ ಘೋಷಣೆಮಾಡಿದ್ದಾರೆ
ಅದಕ್ಕಾಗಿ ನಾವು ಹಾಸನ ಜಿಲ್ಲೆಯ ಇತಿಹಾಸವನ್ನು ಮರುಕಳಿಸಬೇಕಾದರೆ ಲೋಕಸಭಾ ಚುನಾವಣೆಯಲ್ಲಿ ಲೋಕಸಭಾ ಅಭ್ಯರ್ಥಿ ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸುವ ಮುಖಾಂತರ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದವರ ದಬ್ಬಾಳಿಕೆಯನ್ನು ಹೋಗಲಾಡಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಅಧಿಕಾರಕ್ಕೆ ತರಬೇಕು ಹಾಗೂ ಪಕ್ಷವನ್ನು ಬಲಪಡಿಸಬೇಕು,
ಹಾಗಾಗಿ ನಾವು ಸಂಘಟಿತರಾಗಿ ನಮ್ಮ ಪಕ್ಷದ ಹಿತ ದೃಷ್ಟಿಯಿಂದ ನಾವು ಒಗ್ಗಟ್ಟಾಗಬೇಕು ನಾವು ಯಾವ ಪಕ್ಷದವರನ್ನು ಹೊಗಳುವ ತೇಗಳುವ ಕೆಲಸ ಮಾಡುವುದು ಬೇಡ ನಮ್ಮ ಪಕ್ಷ ನಮ್ಮ ಪಕ್ಷದ ಕಾರ್ಯಕ್ರಮಗಳು ಏನೆಂದು ಈಗಾಗಲೇ ದೇಶದ ಜನರಿಗೆ ತಿಳಿದಿದೆ, ಈಗಾಗಲೇ ಗ್ಯಾರಂಟಿ ಯೋಜನೆಯ ಸವಲತ್ತುಗಳನ್ನು ಪ್ರತಿಯೊಬ್ಬರು ಪಡೆದುಕೊಳ್ಳುತ್ತಿದ್ದಾರೆ, ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ, ಕೆ ಶಿವಕುಮಾರ್ ರವರು ಕೊಟ್ಟಿರುವ ಗ್ಯಾರಂಟಿ ಭಾಗ್ಯಗಳು ಜನ ಸಾಮಾನ್ಯರಿಗೆ ಮನವರಿಕೆಯಾಗಿದೆ
ಈ ಯೋಜನೆಗಳು ಪ್ರತಿ ಕುಟುಂಬಕ್ಕೂ ಹಾಗೂ ಪ್ರತಿ ಮನೆಗೂ ತಲುಪಿದೆ ಮಹಿಳೆಯರಿಗೆ ಶಕ್ತಿ ಯೋಜನೆ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳನ್ನು ಕೊಟ್ಟು ದೇಶದ ಬಡವರಿಗೆ ಅನುಕೂಲವಾಗುವಂತಹ ಕಾರ್ಯಗಳನ್ನು ಮಾಡಿದೆ ಜೋತೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಮಾಡಿದಂಥಹ ಲೋಪ ದೋಷಗಳನ್ನು ಎತ್ತಿ ಹಿಡಿಯಬೇಕಾಗಿದೆ ಹಾಗಾಗಿ ಎಲ್ಲಾರು ಒಗ್ಗಟ್ಟಾಗಿ ಪಕ್ಷದ ಅಭಿವೃದ್ಧಿಗೆ ಶ್ರಮಿಸೋಣಾ ಎಂದರು,
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿದ್ದರು,,
