ಬೇಲೂರು : ಕರ್ನಾಟಕ ಸರ್ಕಾರ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಪಟ್ಡಣದ ತಾಲೂಕು ಪಂಚಾಯತಿ ಶಾಸಕರ ಕಚೇರಿಯಲ್ಲಿ ಶಾಸಕ ಹೆಚ್ ಕೆ ಸುರೇಶ್ ಅವರ ನೇತೃತ್ವದಲ್ಲಿ ಲ್ಯಾಪ್ ಟಾಪ್ ವಿತರಿಸಿಲಾಯಿತು.

ನಂತರ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಲ್ಯಾಪ್‌ಟಾಪ್ ನೀಡುತ್ತಿದೆ.ಲ್ಯಾಪ್‌ಟಾಪ್‌ನ ಸದುಪಯೋಗ ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವ ಮೂಲಕ ಸಾಧನೆ ಮಾಡಬೇಕೆಂದು ಸಲಹೆ ನೀಡಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸನ್ನಿಹಿತವಾಗುತ್ತಿದೆ. ಮಕ್ಕಳು ಚೆನ್ನಾಗಿ ಓದಿಕೊಳ್ಳಬೇಕು. ಲ್ಯಾಪ್ ಟ್ಯಾಪ್ ವಿತರಣೆ ಬಡ ವರ್ಗಕ್ಕೆ ಸೇರುವ ಕಟ್ಟಡ ಕಾರ್ಮಿಕ ಮಕ್ಕಳಿಗೆ ಅನುಕೂಲವಾಗಲಿದೆ.ಸರ್ಕಾರದ ಯೋಜನೆಗಳನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ.

ಅಧಿಕಾರಿಗಳು ಕೂಡ ಜನರ ಕಷ್ಟಗಳಿಗೆ ಸ್ಪಂದಿಸಬೇಕು.ಕಾರ್ಮಿಕರು ಕಷ್ಟ ಪಟ್ಟು ಜೀವನ ಮಾಡುತ್ತಾರೆ.ಹಾಗೆಯೇ ಅವರ ಮಕ್ಕಳು ಕೂಡ ಓದಿ ವಿದ್ಯಾವಂತರಾಗಿ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಬೇಕು ಉನ್ನತ ಹುದ್ದೆಗಳನ್ನು ಏರಬೇಕು.ಯಾವುದೇ ಎನೇ ಸಮಸ್ಯೆ ಇದ್ದರೂ ಕೂಡ ನಮ್ಮಲ್ಲಿ ಬಂದು ಹೇಳಿಕೊಳ್ಳಬಹುದು. ಎಲ್ಲರಿಗೂ ಕಾರ್ಮಿಕ ಕೆಲಸ ಮಾಡಲು ಸಾದ್ಯವಿಲ್ಲ ಸುಂದರವಾದ ಕಟ್ಟಡ ಕಟ್ಟಲು ಸಾಧ್ಯವಿಲ್ಲ.

ಕಾರ್ಮಿಕರಿಗಾಗಿ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಉತ್ತಮ ವಿದ್ಯಾಭ್ಯಾಸದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ.ಕೂಲಿ ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಸರ್ಕಾರ ಈಗಾಗಲೇ ಸಾಕಷ್ಟು ಸೌಲಭ್ಯಗಳು ನೀಡುತ್ತವೆ.

ಅದರಲ್ಲಿ ಸ್ಕಾಲರ್ಶಿಪ್, ಹಾಗೂ ಇದೇ ಮೊಟ್ಟ ಮೊದಲ ಬಾರಿಗೆ ಸರ್ಕಾರ ಕಾರ್ಮಿಕರ ಬಡ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರಥಮ ಪಿ ಯು ಸಿ ಮಕ್ಕಳಿಗೆ ಮತ್ತು ದ್ವೀತಿಯ ಪಿ ಯು ಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಗಳನ್ನು ಅರ್ಹ ಪಲಾನುಭವಿಗಳಿಗೆ ನೀಡಲಾಗುತ್ತಿದೆ ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಸತೀಶ್, ಯಮುನಾ ಕಾರ್ಮಿಕ ಅಧಿಕಾರಿ ಹಾಸನ, ವಿಜಯ್ ಕುಮಾರ್ ಕಟ್ಟಡ ಕಾರ್ಮಿಕರ ಇಲಾಖೆ ಬೇಲೂರು, ಪುರಸಭೆ ಅಧ್ಯಕ್ಷರಾದ ಮೀನಾಕ್ಷಿ ವೆಂಕಟೇಶ್, ಅಹಮದ್ ಅಲಿಖಾನ್ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಬೇಲೂರು, ಮತ್ತು ಶರೀಫ್ ಮುಂತಾದವರು ಉಪಸ್ಥಿತರಿದ್ದರು,

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *