ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಪಕ್ಕಾ ಆಗಿದ್ದು, ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿದ್ದು, ಈಗಾಗಲೇ ಹಲವು ಸುತ್ತಿನ ಮಾತುಕತೆ ಬಳಿಕ ಹೈಕಮಾಂಡ್ ಸಿದ್ದರಾಮಯ್ಯಗೆ ಸಿಎಂ ಸ್ಥಾನ ನೀಡಲು ನಿರ್ಧರಿಸಿದೆ ಎನ್ನಲಾಗಿದೆ. ಮತ್ತೊಂದು ಸಭೆ ನಡೆಸಿ ಹೈಕಮಾಂಡ್ ಸಿದ್ದರಾಮಯ್ಯರನ್ನು ಸಿಎಂ ಮಾಡಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ, ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದರು. ಸಿದ್ದರಾಮಯ್ಯ ಮನವಿ ಮೇರೆಗೆ ಸೋನಿಯಾ ಗಾಂಧಿ ನಿವಾಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ನವದೆಹಲಿಯ ಜನಪತ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಲಿರುವ ಸಿದ್ದರಾಮಯ್ಯ, ಮಧ್ಯಾಹ್ನ 12 ಗಂಟೆಗೆ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಮಾತುಕತೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಸಿದ್ದರಾಮಯ್ಯರನ್ನು ಸಿಎಂ ಎಂದು ಘೋಷಣೆ ಮಾಡಲಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *