ಸಕಲೇಶಪುರ :- 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹೆತ್ತೂರಿನಲ್ಲಿ ನೆಡೆಯುತ್ತಿದ್ದು ಇದರ ಲಾಂಛನವನ್ನು ಇಂದು ಹೆತ್ತೂರಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಾಸಕರಾದ ಸಿಮೆಂಟ್ ಮಂಜುನಾಥ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಮೆಂಟ್ ಮಂಜುನಾಥ್” ಹೆತ್ತೂರಿನಲ್ಲಿ ಯಾವುದೇ ಕಾರ್ಯಕ್ರಮವನ್ನು ಮಾಡಿದರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಹಬ್ಬದ ರೀತಿ ಆಚರಿಸುತ್ತಾರೆ. ನಮ್ಮ ತಾಲೂಕಿನಲ್ಲಿ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸುತ್ತಿರುವುದು ಖುಷಿಯ ವಿಚಾರ. ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಸೇರಿ ಕಾರ್ಯಕ್ರಮವನ್ನು ಯಶಸ್ವಿ ಮಾಡೋಣ. ” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಮಲ್ಲೇಶ್ ಗೌಡ ಮಾತನಾಡಿ ” ಹೆತ್ತೂರಿನಲ್ಲಿ ಈ ಬಾರಿಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸೋಣ. ಈ ಬಾರಿಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಿದ ಶಾಸಕರಿಗೆ ಶುಭಾಶಯಗಳು. ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮಾಂಚಾಯಿತಿ ಅಧ್ಯಕ್ಷರಾದ ನಾಗರಾಜ್ ಹಳ್ಳಿಬೈಲು , ತಾಲೂಕು ಕಸಾಪ ಅಧ್ಯಕ್ಷರಾದ ಶಾರದ ಗುರುಮೂರ್ತಿ, ಮದನ್ ಗೌಡ, ಜೆಡಿಎಸ್ ಮುಖಂಡರಾದ ಪುಟ್ಟಸ್ವಾಮಿ ಗೌಡ, ಹೆತ್ತೂರು ಹೋಬಳಿ ಬೆಳಗಾರರ ಸಂಘದ ಅಧ್ಯಕ್ಷರಾದ ದೇವರಾಜ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನೇತ್ರ ಸುರೇಶ್ , ಜಿಲ್ಲಾ ಕಾಸಪ ಪ್ರಧಾನ ಕಾರ್ಯದರ್ಶಿ ಬೊಮ್ಮೇಗೌಡ , ರತನ್, ಹೆತ್ತೂರು ಹೋಬಳಿ ಕಸಾಪ ಅಧ್ಯಕ್ಷರಾದ ರವಿಕುಮಾರ್, ಉಪ ತಹಸಿಲ್ದಾರ್ ಗಂಗಾಧರ್,ಸೇರಿದಂತೆ ಹೋಬಳಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *