
ಚನ್ನರಾಯಪಟ್ಟಣ: ಹೇಮಾವತಿ ನದಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಾಜಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಣತಿ ಆನಂದ್ ಕುಮಾರ್ ಬೆಂಬಲ ಸೂಚಿಸಿದರು.
ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ಇಲಾಖೆ ಮುಂಬಾಗ ನಡೆಯುತ್ತಿರುವ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಆನಂದವರು ಸರ್ಕಾರ ಕೂಡಲೇ ಮಧ್ಯಪ್ರದೇಶ ಮಾಡಿ ಹಾಸನ ಜಿಲ್ಲೆಯ ಕೆರೆಕಟ್ಟೆಗಳನ್ನು ತುಂಬಿಸಿ ಆನಂತರ ತುಮಕೂರು ಜಿಲ್ಲೆಗೆ ಎರಡು ಟಿಎಂಸಿ ನೀರನ್ನು ತೆಗೆದುಕೊಂಡು ಹೋಗಬೇಕು, ನಮ್ಮ ಕೆರೆಕಟ್ಟೆಗಳನ್ನು ತುಂಬಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಣತಿ ಆನಂದ್ ಕುಮಾರ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಅರಳಾಪುರ ಮಂಜೇಗೌಡ, ನಾಡಪ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಆನಂದ್ ಕಾಳೆನಹಳ್ಳಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲೋಕೇಶ್, ಕರ್ನಾಟಕ ರಾಜ್ಯ ಮಹಿಳಾ ಸಂಘದ ಉಪಾಧ್ಯಕ್ಷರಾದ ಪ್ರೇಮಮ್ಮ, ರೈತ ಸಂಘದ ಜಿಲ್ಲಾಧ್ಯಕ್ಷರಾದ ಮೀಸೆ ಮಂಜಣ್ಣ, ಜೋಗಿಪುರ ಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.

