ಚನ್ನರಾಯಪಟ್ಟಣ: ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಜಿ ಆರ್ ಮೂರ್ತಿ ಅಧಿಕಾರ ಸ್ವೀಕಾರ ಮಾಡಿ ಮಾತನಾಡಿ ನನ್ನನ್ನು ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಆಯ್ಕೆ ಆಗಲು ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಾಸನ ಜಿಲ್ಲಾ ಉಸ್ತುವಾರಿ ಮಂತ್ರಿ ಕೇಂದ್ರ ರಾಜಣ್ಣ ಹಾಗೂ ಮಾಜಿ ಶಾಸಕರಾದ ಪುಟ್ಟೇಗೌಡ, ಎಂಎಲ್ಸಿ ಗೋಪಾಲಸ್ವಾಮಿ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ ಎಂದರು.

ಚನ್ನರಾಯಪಟ್ಟಣ ವ್ಯಾಪ್ತಿಯಲ್ಲಿ ಅತ್ಯುತ್ತಮವಾದ ಹೊಸ ಬಡಾವಣೆಗಳನ್ನು ನಿರ್ಮಾಣ ಮಾಡಲು ಶ್ರಮಿಸುತ್ತೇನೆ, ಚನ್ನರಾಯಪಟ್ಟಣ ನಗರ ವ್ಯಾಪ್ತಿಯ ನೂತನ ಲೇಔಟ್ ಗಳನ್ನು ಮಾಡುವಾಗ 30 ಅಡಿಗಳ ರಸ್ತೆಗಳನ್ನು ನಿರ್ಮಾಣ ಮಾಡುವಂತೆ ಆದೇಶ ಮಾಡಲಾಗುವುದು. ಟೌನ್ ಪ್ಲಾನಿಂಗ್ ನ ಅನುಸಾರವಾಗಿ ಲೇಔಟ್ ಗಳನ್ನು ನಿರ್ಮಾಣ ಮಾಡಲಾಗುವುದು ಹಾಗೂ ಮೂಲಭೂತ ಸೌಕರ್ಯಗಳನ್ನು ನೀಡಲು ಶ್ರಮಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಜಿ ಆರ್ ಮೂರ್ತಿ, ನಿರ್ದೇಶಕರುಗಳಾದ ಪ್ರವೀಣ್, ರೋಹಿತ್, ವಿಜಯಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *