ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದೆ. ಶನಿವಾರ ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದೇಶಾದ್ಯಂತ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು ಹಂತದಲ್ಲಿ ನಡೆಯಲಿದೆ.

ಇಂದಿನಿಂದಲೇ (ಶನಿವಾರ) ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.ಈ ಕುರಿತು ಭಾರತೀಯ ಚುನಾವಣೆ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ಏಪ್ರಿಲ್ ೧೯ ಮೊದಲ ಹಂತ, ಏಪ್ರಿಲ್ ೨೬ ೨ನೇ ಹಂತ, ಮೇ ೭ರಂದು ಮೂರನೇ ಹಂತ, ಮೇ ೧೩ ನಾಲ್ಕನೇ ಹಂತ, ಮೇ ೨೦ರಂದು ೫ನೇ ಹಂತ, ಮೇ ೨೫ರಂದು ೬ನೇ ಹಂತ, ಜೂನ್ ೧ರಂದು ೭ನೇ ಹಂತದಲ್ಲಿ ಮತದಾನ ನಡೆಯಲಿದೆ.

ಜೂನ್ ೪ರಂದು ಫಲಿತಾಂಶ ಪ್ರಕಟವಾಗಲಿದೆ ಇನ್ನೂ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ ೨೬ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ೭ರಂದು ನಡೆಯಲಿದೆ.

ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ ೪ ರಂದು ಫಲಿತಾಂಶ ಬರಲಿದೆ.

ಮೊದಲ ಹಂತದಲ್ಲಿ ಮತದಾನ ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಜಿಲ್ಲೆಯಲ್ಲಿ ಚುನಾವಣೆ ನಡೆಯಲಿದೆ.ಎರಡನೇ ಹಂತದ ಮತದಾನ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ನಡೆಯಲಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *