ಸಕಲೇಶಪುರ ಹಾನುಬಾಳು ಹೋಬಳಿ ಕ್ಯಾಮನ ಹಳ್ಳಿಯಲ್ಲಿ ನಿನ್ನೆ ರಾತ್ರಿ ಆನೆ ದಾಳಿ ಮಾಡಿದ ಮುರುಳಿ ಯವರ ಮನೆಗೆ ಶಾಸಕರಾದ ಸಿಮೆಂಟ್ ಮಂಜು ಭೇಟಿ ನೀಡಿದರು.ಅಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಿದ ಅವರು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ಈ ಸಂದರ್ಭದಲ್ಲಿ ಅಲ್ಲಿನ ಜನತೆ ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು.ಈ ಸಂದರ್ಭದಲ್ಲಿ ಅರಣ್ಯ ಅಧಿಕಾರಿ ಶಿಲ್ಪಾ, ರಾಜೀವ್ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಮಲ್ಲೇಶ್, ಭಜರಂಗ ದಳದ ರಘು, ಗ್ರಾಮ ಪಂಚಾಯತ್ ಸದಸ್ಯ ಸಚಿನ್ ಹಾಗೂ ಹಲವಾರು ಮಂದಿ ಉಪಸ್ಥಿತರಿದ್ದರು.