
ನಗರದ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಸಿಮೆಂಟ್ ಮಂಜು
ಸಕಲೇಶಪುರ: ಒಂದು ನಗರದ ಸೌಂದರ್ಯ ಆ ನಗರಕ್ಕಿರುವ ಮೂಲಭೂತ ಸೌಕರ್ಯಗಳ ಆಧಾರದ ಮೇಲೆ ತೀರ್ಮಾನವಾಗುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ನಂತರ ಮಾತನಾಡಿ ಪುರಸಭಾ ವ್ಯಾಪ್ತಿಯಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರೋತ್ಥಾನ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ನಾಲ್ಕನೇ ಹಂತದಲ್ಲಿ 8.50ಕೋ. ರೂ. ಅನುದಾನ ಬಿಡುಗಡೆಯಾಗಿದ್ದು ಹಲವಾರು ಕಾಮಗಾರಿಗಳನ್ನು ಮಾಡಲಾಗಿತ್ತು.
ಇದೀಗ ಬಾಕಿ ಉಳಿದಿರುವ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ತಡೆಗೋಡೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯದ ಕಾಮಗಾರಿಗಳಿಗೆ ಅನುದಾನ ಬಳಕೆ ಮಾಡಲಾಗುವುದೆ.
ನಗರದ ಜನರು ನೆಮ್ಮದಿಯಾಗಿ ವಾಸ ಮಾಡಬೇಕು ಎಂಬುದು ನಮ್ಮ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ಗುತ್ತಿಗೆದಾರರು ಕೈಗೆತ್ತಿಗೊಂಡಿರುವ ಕಾಮಗಾರಿಯನ್ನು ಶೀಘ್ರವಾಗಿ, ಗುಣಮಟ್ಟದಿಂದ ಕೂಡಿದ ಕಾಮಗಾರಿ ನೆಡೆಸುವಂತೆ ಸೂಚನೆ ನೀಡಿದರು.
ರಸ್ತೆ ಬದಿಯ ಬೀದಿ ಬದಿ ವ್ಯಾಪಾರಿಗಳಿಂದ ನಗರದ ಸೌಂದರ್ಯಕ್ಕೆ ಧಕ್ಕೆಯಾಗಿದೆ. ಬೀದಿ ಬದಿ ವ್ಯಾಪಾರಿಗಳೆಂದರೆ ಬೆಳಿಗ್ಗೆ ವ್ಯಾಪಾರಕ್ಕೆ ಬಂದು ರಾತ್ರಿ ನಿರ್ಗಮಿಸಬೇಕು ಆದರೆ ಪಟ್ಟಣದಲ್ಲಿ ಬೀದಿ ಬದಿ ವ್ಯಾಪಾರಿಗಳು ಶಾಶ್ವತವಾಗಿ ನೆಲೆಯೂರಿದ್ದಾರೆ. ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ.
ಕಾರಣಾಂತರಗಳಿಂದ ಪಟ್ಟಣ ಅಭಿವೃದ್ದಿಯಾಗಿಲ್ಲ ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪಟ್ಟಣದ ಅಭಿವೃದ್ದಿಗೆ ಹೆಚ್ಚಿನದಾಗಿ ಶ್ರಮ ಹಾಕುತ್ತೇನೆ. ಪಟ್ಟಣವನ್ನು ಮಾದರಿ ಪಟ್ಟಣ ಮಾಡಬೇಕೆಂಬುದು ನನ್ನ ಕನಸಾಗಿದೆ ಈ ನಿಟ್ಟಿನಲ್ಲಿ ಅಧಿಕಾರಿಗಳು,ವರ್ತಕರು ಹಾಗೂ ಪಟ್ಟಣದ ನಾಗರಿಕರು ಸಹಕರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರಮೇಶ್, ಪುರಸಭಾ ಅಭಿಯಂತರೆ ಸುಜಾತ, ಪುರಸಭಾ ಸದಸ್ಯರುಗಳಾದ ಪ್ರದೀಪ್ ಕೆ.ಎಂ, ಅಣ್ಣಪ್ಪ, ವನಜಾಕ್ಷಿ, ಮುಂತಾದವರು ಹಾಜರಿದ್ದರು.17ಎಸ್.ಕೆ.ಪಿ.ಪಿ 1 ಸಕಲೇಶಪುರ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ವಿವಿ‘ ಕಾಮಗಾರಿಗಳಿಗೆ ಶಾಸಕ ಸಿಮೆಂಟ್ ಮಂಜು ಗುದ್ದಲಿಪೂಜೆ ನೆರವೇರಿಸಿದರು.




