ಆಲೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾಗಿ ಯುವ ನಾಯಕ ಪೃಥ್ವಿ ಜಯರಾಮ್ ರವರನ್ನು ಕರ್ನಾಟಕ ರಾಜ್ಯ ಸರ್ಕಾರ ನೇಮಕ ಮಾಡಿದೆ.

ಸರ್ಕಾರದ ವಿವಿಧ ಗ್ಯಾರಂಟಿಗಳಾದ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ, ಗೃಹಜೋತಿ, ಹಾಗೂ ಯುವನಿಧಿಗಳ ಅನುಷ್ಠಾನಕ್ಕಾಗಿ ತಾಲೂಕು ಅಧ್ಯಕ್ಷರನ್ನಾಗಿ ಜಿಲ್ಲಾ ಅಧಿಕಾರಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಇವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಆದರ್ಶ ಖೋ ಖೋ ಯೂಥ್ ಕ್ಲಬ್ ತಾಲೂಕು ಅಧ್ಯಕ್ಷರಾಗಿ, ದಿ ಆಲೂರು ಕ್ಲಬ್ ನಿರ್ದೇಶಕರಾಗಿ ಹಾಗೂ ಹುಲ್ಲಹಳ್ಳಿ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿ ತಾಲೂಕಿನ ಹಲವು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಸಕ್ರಿಯ ರಾಜಕಾರಣ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ಇವರು ಪ್ರಸ್ತುತ ಕಣತೂರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಪತ್ರಕರ್ತರಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ಆಲೂರು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದಾರೆ.

ಹಲವಾರು ಸಂಘ ಸಂಸ್ಥೆಗಳಲ್ಲಿನ ಸಮಾಜ ಸೇವೆಯನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಪತ್ರಕರ್ತ ಹಾಗೂ ತಾಲೂಕಿನ ಯುವ ನಾಯಕನನ್ನು ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರನ್ನಾಗಿ ನೇಮಿಸಿದೆ. ಇವರೊಂದಿಗೆ 10 ಜನ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದೆ.

ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.ಸಮಿತಿಯು ತಾಲೂಕಿನ ಗ್ಯಾರೆಂಟಿ ಯೋಜನೆಯ ಅನುಷ್ಠಾನದ ವಿಚಾರವಾಗಿ ಕಾರ್ಯ ಪ್ರವೃತ್ತವಾಗಲ್ಲಿದ್ದು, ಗ್ಯಾರೆಂಟಿ ಯೋಜನೆಗಳನ್ನು ತಾಲೂಕು ನಿವಾಸಿಗಳಿಗೆ ತಲುಪಿಸುವ ಕಾರ್ಯನಿರ್ವಹಿಸುವಂತೆ ಸೂಚಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *