
ಬೇಲೂರು : ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ಎಲ್ಲಾ ರೀತಿಯ ಪೂರ್ವಸಿದ್ಧತೆ ಮಾಡಿಕೊಂಡಿದ್ದು ತಾಲೂಕಿನಲ್ಲಿ ಈಬಾರಿ ೨೦೮೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆಪಿ ನಾರಾಯಣ್ ತಿಳಿಸಿದರು.
ಪರೀಕ್ಷಾ ಪೂರ್ವ ಸಿದ್ದತೆ ನಂತರ ಮಾತನಾಡಿದ ಅವರು ೨೦೨೩-೨೪ ನೇ ಸಾಲಿನಲ್ಲಿ ತಾಲೂಕಿನಾದ್ಯಂತ ಒಟ್ಟು ೭ ಪರೀಕ್ಷಾ ಕೇಂದ್ರಗಳಲ್ಲಿ ೨೮೧ ವಿದ್ಯಾರ್ಥಿಗಳು ಹಾಜರಾಗಲಿದ್ದು ಇದರಲ್ಲಿ ಗಂಡುಮಕ್ಕಳು ೯೪೮ ಹೆಣ್ಣುಮಕ್ಕಳು ೧೦೭೦ ಹಾಗೂ ಪುನರ್ ವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳು ೬೩ ಸೇರಿದಂತೆ ಒಟ್ಟು ೨೦೮೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸ್ನೇಹಿಯಾಗಿ ಭಯಮುಕ್ತವಾದ ಪರೀಕ್ಷೆ ಬರೆಯಲು ಮಕ್ಕಳಿಗೆ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಅಣಕು ಪರೀಕ್ಷೆಯನ್ನು ದಿನಾಂಕ ೨೧ ರಂದು ನಡೆಸಲಾಗುತ್ತಿದ್ದು ಎಲ್ಲಾ ವಿದ್ಯಾರ್ಥುಗಳು ಆ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ ಅಣಕು ಪರೀಕ್ಷೆ ವ್ಯವಸ್ಥೆ ಕಲ್ಪಿಸಲಾಗಿದೆ.
ಇದಕ್ಕೆ ತಾಲೂಕು ಮಟ್ಟದ ಎಲ್ಲಾ ಶಿಕ್ಷಕ ವೃಂದದವರನ್ನು ಸೇರಿಸಿ ಪರೀಕ್ಷಾ ಕಾರ್ಯಗಳನ್ನು ಸೂವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಮಾನ್ಯ ತಹಶಿಲ್ದಾರ್ ನೇತೃತ್ವದಲ್ಲಿ ತಾಪಂ ,ಕೆಎಸ್ ಆರ್ ಟಿ ಸಿ ,ಆರಕ್ಷಕ ವೃತ್ತ ನಿರೀಕ್ಚಕರು,ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳ ಸಹಕಾರ ಕೋರಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಸುಮಾರು ೨೦೦ ಮೀಟರ್ ವ್ಯಾಪ್ತೀಯ ನಿಷೇದಾಯ್ಞೆ ಜಾರಿಗೊಳಿಸಲು ಕೋರಿದ್ದು ಹಾಗೂ ಪರಿಕ್ಷಾ ನಕಲು ತಡೆಗಟ್ಟುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಇರುವಂತಹ ಜೆರಾಕ್ಸ್ ಅಂಗಡಿ ಮುಚ್ಚಲು ಕೋರಿದೆ.
ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಹಾಗೂ ಮೂಲಭೂತ ಸೌಕರ್ಯ ಹಾಗೂ ಯಾವುದೇ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯದಂತೆ ಎಚ್ಚರಿಕೆ ವಹಿಸಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಬರುವಂತ ಎಲ್ಲಾ ವಿದ್ಯಾರ್ಥಿಗಳಿಗೆ ತಡೆರಹಿತ ವಾಹನಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.ಅದರಂತೆ ಮಾರ್ಚ್ ೨೫ ರಿಂದ ಏಪ್ರಿಲ್ ೬ ರವರೆಗೆ ಪತೀಕ್ಷೆ ನಡೆಯುವುದರಿಂದ ಭಯಮುಕ್ತರಾಗಿ ಪರೀಕ್ಷೆಗೆ ಹಾಜರಾಗುವಂತೆ ಮನವಿ ಮಾಡಿದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ ತಿಂಗಳ ಗುರಿ ೫ ಎಂಬ ೬ ಸೆಣಿ ಪುಸ್ತಕಗಳನ್ನು ತರುವ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ನೀಡುದ್ದು ಇದರಿಂದ ಅವರ ಅಂಕಗಳಿಕೆಯಲ್ಲಿ ಸಾಧನೆ ಮಾಡುವ ಮೂಲಕ ತಾಲೂಕಿನಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ ಗಳಿಸಲಿ ಎಂಬ ಉದ್ದೇಶದಿಂದ ಎಲ್ಲಾ ಶಿಕ್ಷಕ ವೃಂದದವರ ಸಹಕಾರದಿಂದ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ವಿಶೇಷ ತರಭೇತಿ ನೀಡಲಾಗಿದೆ ಎಂದರು.
