ಸಕಲೇಶಪುರ : ಭಾರತೀಯ ಜನತಾ ಪಕ್ಷದ ಸಕಲೇಶಪುರ ಮಂಡಲ ಅಧ್ಯಕ್ಷರಾಗಿ ವಳಲಹಳ್ಳಿ ಅಶ್ವಥ್ ಆಯ್ಕೆಯಾಗಿದ್ದಾರೆ.

ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಅವರು ಅಶ್ವತ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸುಮಾರು 12 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದು ಹಿಂದೆ ತಾಲೂಕು ಯುವ ಮೋರ್ಚಾ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು.

ಒಕ್ಕಲಿಗ ಜನಾಂಗಕ್ಕೆ ಸೇರಿರುವ ವಳಲಹಳ್ಳಿ ಅಶ್ವಥ್ ಬಿಜೆಪಿಯ ಡೈನಾಮಿಕ್ ಮುಖಂಡರಾಗಿ ಗುರುತಿಸಿಕೊಂಡಿದ್ದು ಪಕ್ಷದ ಕಾರ್ಯಕರ್ತರ ಜೊತೆ ಉತ್ತಮ ಬಾಂದವ್ಯ ಹೊಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಸಿಮೆಂಟ್ ಮಂಜು ಗೆಲುವಿಗೆ ಅಪಾರವಾಗಿ ಶ್ರಮಸಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *