
ಆಲೂರು : ತಾಲೂಕಿನ ಪಾಳ್ಯ ಹೋಬಳಿಯ ರಸ್ತೆಹೊನ್ನಹಳ್ಳಿ ಗ್ರಾಮದ ಸೋಮೇಗೌಡ ಎಂಬುವವರು ತಮ್ಮ ಮನೆಯ ಹಿಂಬಾಗದಲ್ಲಿ ರಾಸುಗಳ ಮೇವಿಗಾಗಿ ಸಂಗ್ರಹಿಸಿಟ್ಟಿದ್ದ ಹುಲ್ಲು ಕೊಡುವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿದೆ
ಈ ಸಂದರ್ಭದಲ್ಲಿ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ರಾಜಣ್ಣ ಹಾಗೂ ಅವರ ತಂಡ ಬೆಂಕಿಯನ್ನು ನಂದಿಸುವ ಕಾರ್ಯ ಕೈಗೊಂಡಿದ್ದರಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗುವುದು ತಪ್ಪಿದಂತಾಗಿದೆ.
ಇವರ ಕಾರ್ಯಕ್ಕೆ ಊರಿನ ಜನರು ಅಭಿನಂದನೆ ಸಲ್ಲಿಸಿದ್ದಾರೆ.


