ಬೆಂಕಿ ಆರಿಸಲು ಹೋದ ರೈತ ಮಹಿಳೆ ಬೆಂಕಿಗಾಹುತಿಯಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಾಚಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ (63) ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ ರೈತ ಮಹಿಳೆ ಎಂದು ಗುರುತಿಸಲಾಗಿದೆ.ನಿನ್ನೆ ರಾತ್ರಿ ತಮ್ಮ ಜಮೀನಿಗೆ ಬೆಂಕಿ ಬಿದ್ದಿತ್ತು.ಈ ವಿಷಯ ತಿಳಿಯುತ್ತಿದ್ದಂತೆ ರತ್ನಮ್ಮ ಸ್ಥಳಕ್ಕೆ ಓಡಿದ್ದಾರೆ. ಈ ವೇಳೆ ತನ್ನ ಜಮೀನಿನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿತ್ತು. ಕೂಡಲೇ ಬೆಂಕಿ ನಂದಿಸಲು ಮುಂದಾಗಿದ್ದಾರೆ.

ಈ ವೇಳೆ ರತ್ನಮ್ಮ ಜೋರಾಗಿ ಉರಿಯುತ್ತಿದ್ದ ಬೆಂಕಿಗೆ ಸಿಲುಕಿದ್ದಾರೆ.

ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದಿದ್ದು, ಬೆಂಕಿಗೆ ಸಿಲುಕಿ ಹೊರಬರಲಾರದೆ ರೈತ ಮಹಿಳೆ ರತ್ನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸದ್ಯ ರತ್ನಮ್ಮ ಮೃತದೇಹವನ್ನು ಆಲೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *