
ಹಾಸನ: ಯಾರು ಕೂಡ ಮತದಾನದಿಂದ ಹಿಂದೆ ಉಳಿಯದೇ ಮತ್ತು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಆತ್ಮಸಾಕ್ಷಿಗೆ ಅನುಗುಣವಾಗಿ ಎಲ್ಲಾರು ಮತ ಚಲಾಯಿಸುವ ಮೂಲಕ ನೂರರಷ್ಟು ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಲೋಕಸಭಾ ಚುನಾವಣೆ ೨೦೨೪ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಬುಧವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಪರ್ವ ದೇಶದ ಗರ್ವ ಘೋಷಣೆಯೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಕ್ಕೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿ ನಂತರ ಮಾತನಾಡಿದ ಅವರು, ಎಲ್ಲಾರೂ ಕೂಡ ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕು. ೮೫ ವರ್ಷ ಮೇಲ್ಪಟ್ಟವರು ಮನೆಯಲ್ಲೆ ಮತ ಚಲಾಯಿಸುವ ಅವಕಾಶ ಕೊಡಲಾಗಿದೆ.
ಕೆಲವರು ತುಂಬ ಸೀನಿಯರ್ ಸಿಟಿಜನ್ ಇರುವವರು ಮತ ಗಟ್ಟೆಗೆ ಬಂದು ಮತ ಹಾಕುವುದಾಗಿ ಹೇಳಿದ್ದು, ಕಳೆದ ಲೋಕಾಸಭಾ ಚುನಾವಣೆಗಿಂತ ಈ ಬಾರಿ ಅದಕ್ಕಿಂತ ಹೆಚ್ಚು ಮತದಾನ ಮಾಡಬೇಕು. ಮತದಾನದಂದು ರೆಸಾರ್ಟ್, ಹೋಂ ಸ್ಟ್ಯೇ ಎಲ್ಲಾವನ್ನು ರದ್ದುಪಡಿಸಿ ನಿಮ್ಮ ಹಕ್ಕನ್ನು ಚಲಾಯಿಸಿ ಎಂದರು.
ಮೇಲು ಕೀಳು, ಬಡವ ಬಲ್ಲಿಗ ಆಗಲಿ, ಕಪ್ಪು ಬಿಳಪು ಆಗಲಿ ಎಲ್ಲಾರಿಗೂ ಇರುವುದು ಹಾಗೂ ಅಂಬಾನಿಯಿಂದ ಹಿಡಿದು ಸಾಮಾನ್ಯ ಮನುಷ್ಯನಿಗೂ ಕೂಡ ಇರುವುದು ಒಂದೆ ಮತ. ಭಾರತದ ಪ್ರಜೆ ಆಗಿರುವುದಕ್ಕೆ ಹೆಮ್ಮೆ ಪಡಬೇಕು ಎಂದು ಕಿವಿಮಾತು ಹೇಳಿದರು.
ಸ್ವೀಪ್ ಸಮಿತಿ ಅಧ್ಯಕ್ಷರಾಗಿ ನಮ್ಮ ಸಿಓ ಇರುತ್ತಾರೆ. ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಅನೇಕ ಕಾರ್ಯಕ್ರಮವನ್ನು ಮಾಡಲಾಗಿದ್ದು, ಓಟರ್ ಲೀಸ್ಟ್ ನೋಡಿದರೇ ಗಂಡಸರ ಮತದಾರರಗಿಂತ ಹೆಣ್ಣು ಮಕ್ಕಳೆ ಹೆಚ್ಚು ಇದ್ದು, ಪೊಲೀಸ್ ಠಾಣೆಯಲ್ಲೂ ಕೂಡ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಪ್ಪದೆ ಮತ್ತು ಯಾವ ಭಯವಿಲ್ಲದೇ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಪೂರ್ಣಿಮಾ ಮಾತನಾಡಿ, ಜಿಲ್ಲಾ ಸ್ವೀಫ್ ಸಮಿತಿಯಿಂದ ಪ್ರತಿ ತಾಲೂಕಿನಲ್ಲೂ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದ್ದು, ೨೦೧೯ ಲೋಕಾಸಭಾ ಚುನಾವಣೆಯಲ್ಲಿ ೭೭.೧೯ ಪರ್ಸೇಂಟ್ ಶೇಕಡ ಮತದಾನವಾಗಿತ್ತು.
ಈ ಬಾರಿ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಶೇಕಡವಾರು ನೂರರಷ್ಟು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದರು. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಚುನಾವಣೆಯ ಪ್ರಚಾರದ ಅಂಬಾಸಿಡರ್ ಸುಷ್ಮಾ ಅವರು ಮಾತನಾಡಿ, ಮತದಾನ ಮಾಡಲು ಅಂಗವಿಕಲರಿಗೂ ಸೌಲಭ್ಯ ಕೊಡಲಾಗಿದೆ. ಎಲ್ಲಾರೂ ಮರೆಯದೇ ಓಟು ಮಾಡುವಂತೆ ಹೇಳಿದರು.
ಇದೆ ವೇಳೆ ಅಪರ ಜಿಲ್ಲಾಧಿಕಾರಿ ಶಾಂತಲಾ, ಜಿಲ್ಲಾ ಪಂಚಾಯತ್ ಪರಪ್ಪಸ್ವಾಮಿ, ಜಿಲ್ಲಾ ಆರೋಗ್ಯಧಿಕಾರಿ ಅನೀಲ್, ಯುವಜನ ಮತ್ತು ಕ್ರಿಡಾ ಇಲಾಖೆ ಸಹಾಯಕ ನಿರ್ದೇಶಕ ಸಿ.ಕೆ. ಹರೀಶ್, ಹಿಮ್ಸ್ ಜಿಲ್ಲಾ ಸರ್ಜನ್ ಲೋಕೆಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ತಮ್ಮಯ್ಯ, ನಗರಸಭೆ ಜೂನಿಯರ್ ಇಂಜಿನಿಯರ್ ಕೆ.ಆರ್. ಕವಿತಾ, ಕಲಾವಿದ ಬಿ.ಟಿ. ಮಾನವ ಇತರರು ಉಪಸ್ಥಿತರಿದ್ದರು.




