ಹಾಸನ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶುಕ್ರವಾರದಂದು ಬೆಳಿಗ್ಗೆ ಹಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಮೂಡಿಸುವ ಬೀದಿ ನಾಟಕ ಹಾಗೂ ಕಾಲ್ನಡಿಗೆ ಜಾಥಕ್ಕೆ ನಗರಸಭೆ ಪರಿಸರ ಸಂರಕ್ಷಣಾಧಿಕಾರಿ ವೆಂಕಟೇಶ್ ಅವರು ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಚಾಲನೆ ನೀಡಿದರು.

ನಂತರ ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ ತಿಂಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಲು ಪ್ರಜಾಪ್ರಭುತ್ವಕ್ಕೆ ಹಕ್ಕು ನೀಡಿದೆ. ಯಾರು ಕೂಡ ದೂರ ಉಳಿಯದೇ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.

ಏಪ್ರಿಲ್ ೨೬ ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ತಪ್ಪದೆ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಇದೆ ವೇಳೆ ಮನವಿ ಮಾಡಿದರು.

ಈ ಜಾಗೃತಿ ಜಾಥದಲ್ಲಿ ನಗರಸಭೆ ಆರೋಗ್ಯಾಧಿಕಾರಿ ಪ್ರಸಾದ್, ಹಿರಿಯ ಕಲಾವಿದ ಬಿ.ಟಿ. ಮಾನವ ಹಾಗೂ ಕಲಾವಿದರು ಸೇರಿದಂತೆ ಇತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *