ಬೇಲೂರು : ತಾಲೂಕಿನ ಬಿಕ್ಕೋಡು ಹೋಬಳಿಯ ಬೊಮ್ಮಡಿಹಳ್ಳಿಯ ದೇವರಾಜ್ ಎಂಬ ವ್ಯಕ್ತಿಯ ಮೇಲೆ ಒಂಟಿ ಕಾಡಾನೆ ದಾಳಿ ಮಾಡಿದೆ
ಗಂಭೀರವಾಗಿ ಗಾಯಗೊಂಡಿರುವ ದೇವರಾಜು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳುಹಿಸಲಾಗಿದೆ.
ಶಾಶ್ವತ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆ ಮತ್ತು ಸರ್ಕಾರ ವಿಫಲವಾಗಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಲೆನಾಡಿನ ಕಾಫಿ ಬೆಳೆಗಾರರು ಹಾಗೂ ರೈತರು ಮತ್ತು ಕಾರ್ಮಿಕರು ಚುನಾವಣೆ ಬಹಿಷ್ಕಾರ ಮಾಡಬೇಕಾಗುತ್ತದೆ ಎಂದು ಬೇಲೂರು ಕಾಫಿ ಬೆಳೆಗಾರರ ಸಂಘದ ಅಧ್ಯಕರಾದ ಅದ್ದೂರಿ ಕುಮಾರ್ ಹಾಗೂ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ