
ಬೇಲೂರು : ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಮತ್ತು ಡಾ.ಶ್ರೀ ಶಿವಕುಮಾರಸ್ವಾಮೀಜಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಿದ್ದಗಂಗಾ ಲಿಂಗೈಕ್ಯ ಡಾ.ಶ್ರೀ ಶ್ರೀ ಶಿವಕುಮಾರಸ್ವಾಮಿಜಿಗಳ ೧೧೭ ನೇ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ, ಹಾಸನ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ತೀರ್ಥಕುಮಾರಿ, ಶರಣ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಸಿ.ಎಂ.ನಿಂಗರಾಜ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಎಲ್.ರಾಜೇಗೌಡ, ಡಾ.ಶ್ರೀ ಶ್ರೀ ಶಿವಕುಮಾರಸ್ವಾಮಿ ಟ್ರಸ್ಟ್ ಕಾರ್ಯದರ್ಶಿ ಗುರುದೇವ್, ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಅದ್ದೂರಿ ಕುಮಾರ್ ಸೇರಿದಂತೆ ಇನ್ನೂ ಮುಂತಾದ ಗಣ್ಯ ಮಾನ್ಯರು ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಪ್ರತಿ ನಿತ್ಯ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ನ, ವಿದ್ಯೆ, ಶಿಕ್ಷಣ ನೀಡುವ ಮೂಲಕ ಸರ್ಕಾರ ನಡೆಸುವ ಕಾರ್ಯವನ್ನು ಮಾಡಿದ್ದಾರೆ. ಇವರ ಹಾದಿಯಲ್ಲಿ ನಾಡಿನ ನೂರಾರು ಮಠ ಮಾನ್ಯಗಳು ಇಂದಿಗೂ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿರುವ ಸಿದ್ದಗಂಗಾ ಶ್ರೀಗಳಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದ ಅವರು ಬೇಲೂರು ಪಟ್ಟಣದ ವೃತ್ತ ಅಥವಾ ರಸ್ತೆಗೆ ಡಾ. ಶ್ರೀ ಶಿವಕುಮಾರಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಬೇಕು ಮತ್ತು ಅವರ ಹೆಸರಿನಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಬೇಕೆಂದು ಮನವಿ ಮಾಡಿದರು.
ವೀರಶೈವ ಸಂಘದ ಮಹಾಸಭಾ ಮಾಜಿ ಅಧ್ಯಕ್ಷ ಸಿ.ಎಂ.ನಿಂಗರಾಜ್ ಮಾತನಾಡಿ, ಸಿದ್ದಗಂಗಾ ಲಿಂಗೈಕ್ಯ ಶ್ರೀಗಳು ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅಸಾಮಾನ್ಯ ಸಾಧನೆಗೈದ ಮಹಾನುಭಾವರು.ಇಂತಹ ಶ್ರೀಗಳ ಆದರ್ಶ ಮತ್ತು ಬದುಕು – ಬರಹಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು ೧೧೧ ವರ್ಷ ಬಾಳಿದ ಶ್ರೀಗಳು ತಮ್ಮ ಜೀವಾವಧಿತನಕ ಕಾಯಕದ ಮಹತ್ವ ನಾಡಿಗೆ ತಮ್ಮ ಸಂದೇಶ ನೀಡಿದ್ದಾರೆ. ಇಂತಹ ಪೂಜ್ಯರು ಯಾವುದೇ ಜಾತಿ,ಧರ್ಮ ಭೇದವಿಲ್ಲದೆ ಶಿಕ್ಷಣ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ ಎಂದರು.
ಹಾಸನ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ತೀರ್ಥಕುಮಾರಿ ಮಾತನಾಡಿ, ಡಾ.ಶ್ರೀ ಶಿವಕುಮಾರಸ್ವಾಮೀಜಿಗಳ ಗುರುವಂದನೆ ಬೇಲೂರಿನಲ್ಲಿ ನಡೆದ ಸಂದರ್ಭದಲ್ಲಿ ದಂಪತಿಗಳಿಗೆ ಪೂಜ್ಯರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಿದ್ದು ನಮಗೆ ಖುಷಿ ನೀಡಿದೆ. ನಾವುಗಳು ಕೂಡ ಶ್ರೀಗಳ ಅದರ್ಶ ಮತ್ತು ಬಸವಣ್ಣನವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಬಗ್ಗೆ ತಿಳಿಸಿದ ಅವರು ಈಗಾಗಲೇ ಬೇಲೂರು ಶರಣ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾದ ಹೆಬ್ಬಾಳು ಹಾಲಪ್ಪನವರು ಬೇಲೂರು ಪಟ್ಟಣದ ಯಾವುದಾದರೂ ವೃತ್ತ ಅಥವಾ ರಸ್ತೆಗೆ ಡಾ. ಶ್ರೀ ಶಿವಕುಮಾರಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಬೇಕು ಎಂದು ತಿಳಿಸಿದ್ದಾರೆ.
ಅವರು ಕೂಡ ಒಂದು ಮನವಿ ಪತ್ರವನ್ನು ಪುರಸಭೆ ನೀಡಿ. ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ತೊ.ಚ.ಅನಂತಸುಬ್ಬರಾಯ, ಕದಳಿ ಮಹಿಳಾ ವೇದಿಕೆ ಉಪಾಧ್ಯಕ್ಷೆ ಹೇಮಾ ವಿರೂಪಾಕ್ಷ, ಖಜಾಂಚಿ ಉಮೇಶ್, ನಿವೃತ್ತ ಶಿಕ್ಷಕ ಧನಂಜಯ, ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ವಿನುತ ಧನಂಜಯ, ವಿಜಯಲಕ್ಷ್ಮಿ, ವಿರೂಪಾಕ್ಷ, ಉಪನ್ಯಾಸಕ ಧನಂಜಯ, ಲಯನ್ಸ್ ಸಂಸ್ಥೆ ಅಧ್ಯಕ್ಷ ವೈ.ಬಿ.ಸುರೇಶ್, ಕಾವೇರಿ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಚಂದ್ರಮೌಳಿ, ತಾಲ್ಲೂಕು ವೀರಶೈವ ಸಂಘದ ಅಧ್ಯಕ್ಷ ರವಿಕುಮಾರ್, ಡಾ.ರಾಜಕುಮಾರ ಅಭಿಮಾನಿಗಳ ಸಂಘದ ಅಧ್ಯಕ್ಷ ತೀರ್ಥಂಕರ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಮ.ಶಿವಮೂರ್ತಿ, ಚಂದ್ರಣ್ಣ, ಶೇಖರಣ್ಣ, ಕರವೇ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್, ಪತ್ರಕರ್ತರಾದ ಗಣೇಶ್ ಮತ್ತು ಲೋಕಿ ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದ ಸಮಾರಂಭದಲ್ಲಿ ಪುಷ್ಪಗಿರಿ ಕಲಾ ತಂಡದ ಚಂದನ್ ಕುಮಾರ್ ಸುಗಮ ಸಂಗೀತ ನಡೆಸಿಕೊಟ್ಟರು
ಬಾಕ್ಸ್ ನ್ಯೂಸ್ :- ಸುತ್ತೂರಿನ ಈ ಹಿಂದಿನ ಜಗದ್ಗುರುಗಳ ೧೨ ನೇ ಶತಮಾನದ ಶರಣರ ವಿಚಾರಧಾರೆಗಳು ಇಡೀ ನಾಡಿನಲ್ಲಿ ತಿಳಿಸಬೇಕು ಮತ್ತು ಯುವ ಸಮುದಾಯಕ್ಕೆ ಅರಿವು ಮೂಡಿಸಲು ಶರಣ ಸಾಹಿತ್ಯ ಪರಿಷತ್ತು ಸ್ಥಾಪನೆ ಮಾಡಿದ್ದಾರೆ. ಇವರ ಅಶಯದಂತೆ ನಾವುಗಳು ಕೂಡ ಬೇಲೂರಿನಲ್ಲಿ ಸರ್ವ ಸದಸ್ಯರ ಅಭಿಪ್ರಾಯ ಪಡೆದು ಉತ್ತಮ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಬೇಲೂರು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ ತಿಳಿಸಿದರು.

