ಹಾಸನ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ.ಗೌಡ ಅವರು ಹಾಸನ ಜಿಲ್ಲೆಯಲ್ಲಿ ಮೈತ್ರಿ ವಿರುದ್ಧವಾಗಿದ್ದರೂ ಹಾಸನ ಜೆಡಿಎಸ್ ಪಾಲಾಗಿತ್ತು. ಅವರ ಮುನಿಸು‌ ಶಮನಕ್ಕಾಗಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಮೈತ್ರಿ ಪಕ್ಷಗಳ ವಿಶೇಷ ಸಮನ್ವಯ ಸಮಿತಿ ಸಭೆಯಲ್ಲಿನ ಸಂಧಾನ ಬಹುತೇಕ ಯಶಸ್ವಿಯಾಗಿದ್ದು, ಪ್ರಜ್ವಲ್‌ ಜತೆ ಮಾತನಾಡದಿದ್ದರೂ ಕೆಲಸ ಮಾಡಲು ಪ್ರೀತಂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸಭೆಯಲ್ಲಿ ಜೆಡಿಎಸ್‌ನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ, ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಮತ್ತಿತರರು ಭಾಗಿಯಾಗಿದ್ದರು. ಪ್ರೀತಂಗೌಡ ತಟಸ್ಥ ಧೋರಣೆ ಅನುಸರಿಸುತ್ತಿರುವ ಬಗ್ಗೆ ಜೆಡಿಎಸ್ ನಾಯಕರು ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಸಭೆ ಆಯೋಜಿಸಲಾಗಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *