
ಸಕಲೇಶಪುರ : ಚುನಾವಣಾ ಆಯೋಗ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪುರಸಭೆಯ ವತಿಯಿಂದ ಇಂದು ಪಟ್ಟಣದಲ್ಲಿ ಬೀದಿ ನಾಟಕ ಪ್ರದರ್ಶನ ನೀಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಲೋಕಸಭೆ ಚುನಾವಣೆಯು ಇದೆ ಏಪ್ರಿಲ್ 26 ರಂದು ನಡೆಯಲಿದ್ದು ಎಲ್ಲಾ ಮತದಾರರು ನಿರ್ಭೀತಿಯಿಂದ ಮತಗಟ್ಟೆಗೆ ಹೋಗಿ ತಮ್ಮ ಮತವನ್ನು ಕಡ್ಡಾಯವಾಗಿ ಚಲಾಯಿಸುವಂತೆ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗಳಾದ ಡಾ.ಎಂ.ಕೆ.ಶೃತಿ ಅವರು ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಮೇಘನಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ರಾಮಕೃಷ್ಣ, ಪುರಸಭೆ ಮುಖ್ಯಾಧಿಕಾರಿ ರಮೇಶ್,ತಾಲೂಕು ಪಂಚಾಯಿತಿ ಎಡಿಸಿ ಹರೀಶ್, ಹಾಗೂ ಪುರಸಭೆಯ ಸಿಬ್ಬಂದಿಗಳು,ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿವಿದ ಇಲಾಖೆಗಳ ಸಿಬ್ಬಂದಿಗಳು ಇದ್ದರು.
