
ಸಕಲೇಶಪುರ : ಪಟ್ಟಣದ ಮಿನಿ ವಿಧಾನಸೌದದ ಆವರಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನ ರಾಂ ಅವರ 117 ನೇ ಜನ್ಮದಿನಾಚರಣೆಯನ್ನು ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಾಬು ಜಗಜೀವನರಾಂ ರವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ದೀಪ ಬೆಳಗಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಳಾದ ಡಾ. ಶೃತಿ ,ತಹಸೀಲ್ದಾರ್ ಮೇಘನಾ ,ಇ ಓ ರಾಮಕೃಷ್ಣ, ಪುರಸಭೆ ಮುಖ್ಯಾಧಿಕಾರಿ ರಮೇಶ್ ಹಾಗೂ ಹಲವು ಇಲಾಖೆಗಳ ಸಿಬ್ಬಂದಿಗಳು,ದಲಿತ ಮುಖಂಡರು ಹಾಜರಿದ್ದರು.


