ಬೇಲೂರು : ಏಪ್ರಿಲ್. ೫” ಹಸಿರು ಕ್ರಾಂತಿ ಹರಿಕಾರ ಜಗಜೀವನರಾಮ್ ರವರ ಅರ್ಥಪೂರ್ಣ ‌ಜಯಂತಿ” ಬೇಲೂರು ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ‌ ಅಚರಣಾ ಸಮಿತಿ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ್‌ ರವರ ಜಯಂತಿಯನ್ನು ಲೋಕಸಭಾ ಚುನಾವಣೆ ನೀತಿ ಸಂಹಿತೆ ಇರುವ ಕಾರಣದಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ಮತ್ತು ಅರ್ಥಪೂರ್ಣವಾಗಿ‌ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೇಲೂರು ವಿಧಾನಸಭಾ ೧೯೫ ಸಹಾಯಕ‌ ಚುನಾವಣಾಧಿಕಾರಿ‌‌ ಎಂ.ಎನ್.ಮಂಜುನಾಥ್, ತಹಸೀಲ್ದಾರ್ ಎಂ.ಮಮತ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಮೇಶ್ ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದರು.

ಈ‌ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಚುನಾವಣಾಧಿಕಾರಿ ಎಂ.ಎನ್.ಮಂಜುನಾಥ, ಬಾಬು ಜಗಜೀವನರಾಮ್‌ ಅವರು ಸೃಷ್ಟಿಸಿದ ಹಸಿರು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು. ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನಕ್ಕೂ ಆದ್ಯತೆ ಕೊಟ್ಟಿದ್ದರಿಂದ ಇಂದು ಸಮಾಜದಲ್ಲಿ ಆಹಾರ ಪದಾರ್ಥಗಳ ಕೊರತೆಯಿಲ್ಲ ಎಂದ ಅವರು ನಾವೆಲ್ಲರೂ ಸಮಾನರು ಎಂಬ ಮನೋಭಾವನೆ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು.

ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು ಜೀವನ ಮಟ್ಟ ಸುಧಾರಣೆ ಮಾಡಿಕೊಳ್ಳಬೇಕು. ಡಾ. ಜಗಜೀವನ ರಾಮ್ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆಯಬೇಕು. ಮಹಾಪುರುಷರ, ಮಹಾನಾಯಕರ, ಯೋಗಿಗಳ ಜಯಂತಿ ಮಾಡುವ ಉದ್ದೇಶವನ್ನು ಸಫಲಗೊಳಿಸಬೇಕು. ಇಂದಿನ ಯುವಕರು ರಾಷ್ಟ್ರ ನಾಯಕರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಸನ್ಮಾರ್ಗದತ್ತ ಸಾಗಬೇಕು ಎಂದರು.

ತಹಸೀಲ್ದಾರ್ ಎಂ.ಮಮತ ಮಾತನಾಡಿ, ಬಾಬೂಜಿ ಎಂದೇ ಹೆಸರಾಗಿದ್ದ ಬಾಬು ಜಗಜೀವನರಾಮ್‌ ನಿಸ್ವಾರ್ಥ ಸೇವೆ, ಸ್ವಾತಂತ್ರ್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದ ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ. ಅವರು ಕೇಂದ್ರ ಮಂತ್ರಿಮಂಡಲದ ಸದಸ್ಯರಾಗಿ ಅಪಾರ ಆಡಳಿತ ಅನುಭವ ಗಳಿಸಿದರು. ಸಾರಿಗೆ, ಆಹಾರ, ರೈಲ್ವೆ, ಕೃಷಿ ಮತ್ತು ಸಮುದಾಯ ಅಭಿವೃದ್ಧಿ, ಕಾರ್ಮಿಕ ಮತ್ತು ಉದ್ಯೋಗ ಪುನರ್ವಸತಿ ಕೆಲಸವನ್ನು ಮಾಡಿದ ಹಿರಿಮೆ ಅವರದು ಚುನಾವಣೆ ನೀತಿ ಸಂಹಿತೆ ಇರುವ ಕಾರಣದಿಂದ ತಾಲ್ಲೂಕು ಆಡಳಿತದಿಂದ ಸರಳವಾಗಿ‌ ಆಚರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಕಚೇರಿ ಗ್ರೇಟ್ ೨ ತಹಸೀಲ್ದಾರ್ ಅಶೋಕ, ಶಿರಸ್ರೇದಾರ್ ರಂಗಸ್ವಾಮಿ, ಆಹಾರ ಇಲಾಖೆ ಅಧಿಕಾರಿ ಮಂಜುನಾಥ, ಶಿಶು ಮತ್ತು ಮಹಿಳಾ ಕಲ್ಯಾಣ ಇಲಾಖೆ ಅಧಿಕಾರಿ ಉಮೇಶ್, ದೈಹಿಕ ಪರಿವೀಕ್ಷಕ ಪಾಲಾಕ್ಷಮೂರ್ತಿ, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ದಾಸಪ್ಪ ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *