ಸಕಲೇಶಪುರ : ಏಪ್ರಿಲ್ 26 ರಂದು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕೆಂದು ತಾಲೂಕು ಆಡಳಿತದ ವತಿಯಿಂದ ಮೇಣದ ಬತ್ತಿಯ ಬೆಳಕಿನೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ತಾಲೂಕು ಚುನಾವಣೆ ಸ್ವೀಪ್ ಸಮಿತಿಯ ವತಿಯಿಂದ ಲೋಕಸಭೆ ಚುನಾವಣೆಯಲ್ಲಿ ಮತದಾರೆಲ್ಲರೂ ಏಪ್ರಿಲ್ 26 ರಂದು ಮತಕೇಂದ್ರಕ್ಕೆ ಹೋಗಿ ಕಡ್ಡಾಯವಾಗಿ ಶೇ 100 ರಷ್ಟು ಮತದಾನ ಮಾಡುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಮೆರವಣಿಗೆಯಲ್ಲಿ ಸಾಗಿ ನಂತರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಮಾನವ ಸರಪಳಿಯೊಂದಿಗೆ ಮೇಣದ ಬತ್ತಿಯನ್ನು ಬೆಳಗಿಸಲಾಯಿತು

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ರಾಮಕೃಷ್ಣ, ಸಹಾಯಕ ನಿರ್ದೇಶಕ ಹರೀಶ್ , ಪುರಸಭೆ ಮುಖ್ಯಾಧಿಕಾರಿ ರಮೇಶ್, ಹಾಗೂ ವಿವಿದ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *