ಸಕಲೇಶಪುರ :- ಹಾಸನ ಜಿಲ್ಲೆಯ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರಿಂದ ಗುರುವಾರ ತಾಲೂಕಿನ ಹೆತ್ತೂರು ಹಾಗೂ ಯಸಳೂರು ಹೋಬಳಿಯಲ್ಲಿ ಬೆಳಗ್ಗೆಯಿಂದ ಭರ್ಜರಿ ಚುನಾವಣಾ ಪ್ರಚಾರ ನಡೆಸಲಾಯಿತು.

ಮಧ್ಯಾಹ್ನ ಬ್ಯಾಕರವಳ್ಳಿ ವೃತ್ತಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಗೂ ತಾಲೂಕಿನ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರ ತಂಡ ಆಗಮಿಸಿತ್ತು.ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಕಾರ್ಯಕರ್ತರನ್ನು ಉದ್ದೇಶಿಸಿ ಶ್ರೇಯಸ್ ಪಟೇಲ್ ಮಾತನಾಡುತ್ತಾ ” ಈ ಭಾಗದ ರೈತರ ಸಮಸ್ಯೆಗಳು ನನಗೆ ಮನವರಿಕೆಯಾಗಿದೆ. ಇದಕ್ಕೆ ಸ್ಪಂದಿಸುವ ಕೆಲಸವನ್ನು ನಾನು ಖಂಡಿತ ಮಾಡುತ್ತೇನೆ.ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಕಟ್ಟುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡೋಣ . ಇದರಿಂದ ನಮ್ಮ ಪಕ್ಷಕ್ಕೆ ಗೆಲುವು ನಿಶ್ಚಿತ. ಈ ನಿಟ್ಟಿನಲ್ಲಿ ಎಲ್ಲರೂ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು. ನಾನು ಯುವಕ ಇದ್ದೀನಿ ,ದಯಮಾಡಿ ಈ ಬಾರಿ ನಮಗೊಂದು ಅವಕಾಶವನ್ನು ಮಾಡಿಕೊಡಿ. ನೀವು ಕೊಡುವ ಮತಕ್ಕೆ ಋಣಿಯಾಗಿರುತ್ತೇನೆ ಈ ಬಾರಿ ದಯಮಾಡಿ ನನ್ನನ್ನು ಕೈಹಿಡಿರಿ . ” ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಮುರುಳಿ ಮೋಹನ್ ಮಾತನಾಡುತ್ತಾ ” ಕೆಲಸ ಮಾಡಲು ಉತ್ಸಾಹಿ ಯುವಕ ಆಗಿರುವ ಶ್ರೇಯಸ್ ಪಟೇಲ್, ಖಂಡಿತವಾಗಿಯೂ ಸ್ಪಂದಿಸುವ ಕೆಲಸವನ್ನು ಮಾಡುತ್ತಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶ್ರೇಯಸ್ ಪಟೇಲರಿಗೆ ಮತ ನೀಡುವ ಮೂಲಕ ಹೆಚ್ಚಿನ ಮತಗಳ ಅಂತರದಿಂದ ಜಯಶೀಲರಾಗಿ ಮಾಡುವ ಮೂಲಕ ಈ ಭಾಗಕ್ಕೆ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿಕೊಳ್ಳೋಣ. “ಎಂದರು

ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಿಂದಿನಗಿಂತಲೂ ಅಧಿಕ ಸಂಖ್ಯೆಯ ಕಾರ್ಯಕರ್ತರು ನೆರೆದಿದ್ದು ಈ ಬಾರಿ ಇಲ್ಲಿ ಬೇರೆ ಬೇರೆ ಪಕ್ಷದಿಂದ ಹೊರಬಂದ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಜೊತೆಗೆ ಕಾಂಗ್ರೆಸ್ ಪಕ್ಷ ಕಟ್ಟುವ ಕೆಲಸವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಗನಾಥ್ ಶೆಟ್ಟಿ ಹಾಗೂ ಅವರ ತಂಡ ಮಾಡುತ್ತಿರುವುದಕ್ಕೆ ಸಾಕ್ಷಿಯಾಗಿತ್ತು.

ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೈರಮುಡಿ ಚಂದ್ರು, ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಅನ್ನಪೂರ್ಣ, ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಬಾಚಿಹಳ್ಳಿ ಪ್ರತಾಪ್ ಗೌಡ, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷರಾದ ಪ್ರಜ್ವಲ್ ಚಿನ್ನಹಳ್ಳಿ, ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಗನಾಥ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ನಾಗೇಶ್, ಸರಿತಾ, ಅಂಬಿಕಾ ಇಬ್ಬಡ್ಡಿ ಕೋಣನೂರು,ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಗತ್ಯರಾದ ಪುಟ್ಟರಾಜು,ಸ್ಥಳೀಯ ಕಾಂಗ್ರೆಸ್ ಮುಖಂಡರುಗಳಾದ ಕಾರ್ತಿಕ್, ಯುವರಾಜ್ ಸುಳ್ಳಕ್ಕಿ, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *