ಚನ್ನರಾಯಪಟ್ಟಣ: ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿರುವುದು ಮಂಗಳೂರು ಪಿಯು ಕಾಲೇಜಿಗೆ ಹೆಮ್ಮೆಯ ವಿಚಾರ ಎಂದು ನಾಡಪ್ರಭು ಕೆಂಪೇಗೌಡ ವೇದಿಕೆಯ ರಾಜ್ಯಾಧ್ಯಕ್ಷರಾದ ಕಾಳೇನಹಳ್ಳಿ ಆನಂದ್ ಹರ್ಷ ವ್ಯಕ್ತಪಡಿಸಿದರು.

ಅವರು ಪಟ್ಟಣದ ಮಂಗಳೂರು ಪಿಯು ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ ಹೆಚ್ಚಾಗಿ ಇಷ್ಟಪಟ್ಟು ಓದುವುದು ಅತಿ ಮುಖ್ಯವಾಗಿದೆ ಎಂದರು,

ಪ್ರತಿಯೊಬ್ಬ ವಿದ್ಯಾರ್ಥಿಗಳು ತಾವು ವಿದ್ಯಾಭ್ಯಾಸ ಮಾಡಿದ ಕಾಲೇಜಿಗೆ ಮತ್ತು ತಮಗೆ ಜನ್ಮ ನೀಡಿದ ತಂದೆ ತಾಯಿಗಳಿಗೆ ಹಾಗೂ ತಮ್ಮ ಊರಿಗೆ ಹೆಮ್ಮೆ ಬರುವ ಹಾಗೆ ವಿದ್ಯಾಭ್ಯಾಸ ಮಾಡಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸ್ ಆಗುವ ಮೂಲಕ ಈ ತಾಲೂಕಿಗೆ ಕೀರ್ತಿ ತರಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಯಾವುದೇ ವಿದ್ಯಾರ್ಥಿಗಳಾಗಲಿ ಕಾಟಚಾರಕ್ಕೆ ವಿದ್ಯಾಭ್ಯಾಸವನ್ನು ಮಾಡಬಾರದು ಪ್ರತಿಯೊಬ್ಬರು ಕಾಯ ವಾಚಾ ಮನಸಾ ಶ್ರಮಪಟ್ಟು ವಿದ್ಯಾಭ್ಯಾಸ ಮಾಡಿದರೆ ಈ ಸಮಾಜದಲ್ಲಿ ಅತ್ಯುತ್ತಮವಾದ ಸ್ಥಾನವನ್ನು ಪಡೆದು ಎಲ್ಲರಿಂದಲೂ ಪ್ರಸಂಸೆಗೆ ಪಾತ್ರರಾಗಬಹುದು, ಆದಕಾರಣ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಪ್ರಮುಖ ಆದ್ಯತೆಯ ಕೊಟ್ಟು ಅತ್ಯುನ್ನತ ಮಟ್ಟದ ಅಂಕಗಳನ್ನು ಪಡೆದು ರಾಜ್ಯದ ಟಾಪರ್ ಸ್ಥಾನವನ್ನು ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಂಗಳೂರು ಪಿಯು ಕಾಲೇಜಿನ ಫಲಿತಾಂಶ ಅತ್ಯುನ್ನತ ಶ್ರೇಣಿ 84, (ಡಿಸ್ಟಿಂಕ್ಷನ್)ಪ್ರಥಮ ಶ್ರೇಣಿ – 98,ದ್ವಿತೀಯ ಶ್ರೇಣಿ – 6, ಮಂದಿ ತೇರ್ಗಡೆ ಹೊಂದಿದ್ದಾರೆ.

ಚನ್ನರಾಯಪಟ್ಟಣ ಮಂಗಳೂರು ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ಹೆಚ್ ಬಿ 585 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸತತವಾಗಿ ಐದು ವರ್ಷಗಳಿಂದಲೂ ನೂರು ಪ್ರತಿಶತ ಫಲಿತಾಂಶ ಬಂದಿರುತ್ತದೆ,ವಿಜ್ಞಾನ ವಿಭಾಗದಲ್ಲಿ ಶಶಾಂಕ್ ಎನ್ ಆರ್ 580 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. 579 ಅಂಕಗಳನ್ನು ಪಡೆದ ಸಂದೀಪ್ ಗೌಡ ದ್ವಿತೀಯ ಟಾಪರ್ ಆಗಿದ್ದಾರೆ, 578 ಅಂಕಗಳನ್ನು ಪಡೆದ ರೋಹಿಣಿ ತೃತೀಯ ಟಾಪರ್ ಆಗಿದ್ದಾರೆ, ವಿಜ್ಞಾನ ವಿಭಾಗದಲ್ಲಿ ಒಟ್ಟು 65 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನೊಂದಿಗೆ ಪಾಸಾಗಿರುತ್ತಾರೆ,ವಿಜ್ಞಾನ ವಿಭಾಗದಲ್ಲಿ ಶೇಕಡ 99 ಫಲಿತಾಂಶ ಬಂದಿರುತ್ತದೆ.ಕಳೆದ 5 ವರ್ಷಗಳಿಂದಲೂ ಸತತವಾಗಿ ಉತ್ತಮ ಫಲಿತಾಂಶ ನೀಡುತ್ತಿರುವ ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಆಡಳಿತ ಮಂಡಳಿಯ ಕಾರ್ಯದರ್ಶಿ ಜೆ ಎಸ್ ಪ್ರದೀಪ್ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಮಂಗಳೂರು ಪಿಯು ಕಾಲೇಜಿನ ಕಾರ್ಯದರ್ಶಿಗಳಾದ ಜಿ ಎಸ್ ಪ್ರದೀಪ್, ನಾಡಪ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕಾಳೇನಹಳ್ಳಿ ಆನಂದ್, ಉಪನ್ಯಾಸಕರಾದ ವಸಂತಕುಮಾರ್,ದೀಪಾ, ಯೋಗೇಶ್ ,ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *