
ಅರಕಲಗೂಡು: ಪಟ್ಟಣದಲ್ಲಿ ಶುಕ್ರವಾರ ಮತದಾನ ಜಾಗೃತಿಗಾಗಿ ಬೈಕ್ ಜಾಥಾ ನಡೆಸಲಾಯಿತು.
ಸಂತೆಮರೂರು ರಸ್ತೆ ಬನ್ನಿ ಮಂಟಪದ ಹೊರಟ ಜಾಥಾ. ಪ್ರಮುಖ ಬೀದಿಗಳಲ್ಲಿ ಸಂಚರಿಸಿತು ತಾಪಂ, ಪಪಂ, ಗ್ರಾಪಂ ಸೇರಿದಂತೆ ವಿವಿಧ ಇಲಾಖೆ ನೌಕರರು ಸಂಘ ಸಂಸ್ಥೆಗಳು ಜಾಥಾದಲ್ಲಿ ಭಾಗವಹಿಸಿದ್ದರು.
ತಾಪಂ ಇಒ ಪ್ರಕಾಶ್ ಮಾತನಾಡಿ, ಮತದಾನ ಕುರಿತು ಅರಿವು ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿದೆ. ಜನತೆ ಆಸೆ, ಆಮಿಷಗಳಿಗೆ ಬಲಿಯಾಗದೆ ಮತದಾನ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
ಪಪಂ ಮುಖ್ಯಾಧಿಕಾರಿ ಬಸವರಾಜಪ್ಪ ಟಾಕಪ್ಪ ಶಿಗ್ಗಾಂವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
