ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿ ಕುನಿಗನಹಳ್ಳಿ ,ಬಾಗೆ, ಉದೆವಾರ, ಮಳಲಿ ಹಾನುಬಾಳು ,ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಮಲೆನಾಡು ಭಾಗದ ರೈತರು ಕೆಲವು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ಧಾರೆ .

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಶ್ರೇಯಸ್ ಪಟೇಲ್ ಗೆ ಮತ ನೀಡಿದರೆ ರೈತರ ಸಮಸ್ಯೆಗೆ ಸ್ಪಂದಿಸುವ ಪ್ರಾಮಾಣಿಕ ಕೆಲಸವನ್ನು ಮಾಡುತ್ತಾನೆ ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರು ಬಿನ್ನಾಭಿಪ್ರಾಯ ಮರೆತು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಮ್ಮ ಪಕ್ಷಕ್ಕೆ ಗೆಲುವು ಖಚಿತ ಎಂದರು. ಸಿದ್ದರಾಮಯ್ಯನವರ ಸರಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ ಸುಮಾರು 5000 ಪ್ರತಿ ತಿಂಗಳು ತಲುಪುತ್ತಿದೆ, ಈ ನಿಟ್ಟಿನಲ್ಲಿ ಎಲ್ಲರೂ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು. ನನ್ನ ಮಗ ಯುವಕ ,ದಯಮಾಡಿ ಈ ಬಾರಿ ಅವನಿಗೊಂದು ಅವಕಾಶವನ್ನು ಮಾಡಿಕೊಡಿ.

ಈ ಭಾಗದ ರೈತರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಾನೆ, ನೀವು ಕೊಡುವ ಮತಕ್ಕೆ ಪ್ರಾಮಾಣಿಕವಾಗಿ ಕೆಲಸವನ್ನು ಮಾಡುತ್ತಾನೆ ಎಂದು ಹೇಳಿದರು.

ಕಳೆದ 40 ವರ್ಷಗಳಿಂದ ನಿರಂತರವಾಗಿ ಒಂದು ಕುಟುಂಬದ ವಿರುದ್ಧ ರಾಜಕೀಯದ ಅಸ್ತಿತ್ವಕ್ಕಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆ ಕುಟುಂಬಕ್ಕೆ ಸೋಲಿನ ಭೀತಿ ಎದುರಾಗಿದ್ದು ಈ ಅವಕಾಶವನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಕೈಚೆಲ್ಲಬಾರದು ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೆಲ್ ಮಾತನಾಡಿ ತಾಲೂಕಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಇದೊಂದು ಬಾರಿ ನನ್ನನ್ನು ಗೆಲ್ಲಿಸಿ ನಿಮ್ಮಗಳ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು.

ಕಾಂಗ್ರೆಸ್ ಮುಖಂಡರಾದ ಮುರುಳಿ ಮೋಹನ್ ಮಾತನಾಡುತ್ತಾ ” ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದೆ. ಪ್ರತಿ ಗ್ರಾಮಮಟ್ಟದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ಒಲವು ತೋರುತ್ತ ಬೇರೆ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶ್ರೇಯಸ್ ಪಟೇಲರಿಗೆ ಮತ ನೀಡುವ ಮೂಲಕ ಹೆಚ್ಚಿನ ಮತಗಳ ಅಂತರದಿಂದ ಜಯಶೀಲರಾಗಿ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೈರಮುಡಿ ಚಂದ್ರು, ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಅನ್ನಪೂರ್ಣ, ಕಾಂಗ್ರೆಸ್ ಮುಖಂಡರು ಹಾಗೂ ,ಸಮಾಜ ಸೇವಕರಾದ ಬಾಚಿಹಳ್ಳಿ ಪ್ರತಾಪ್ ಗೌಡ, ಹೆಚ್.ಹೆಚ್.ಉದಯ್, ಯೆಡಹಳ್ಳಿ ಆರ್ ಮಂಜುನಾಥ್ ಬೈಕೆರೆ ದೇವರಾಜ್, ಎಸ್ಸಿ,ಎಸ್ಟಿ ಘಟಕದ ಅದ್ಯಕ್ಷ ಪ್ರಶಾಂತ್ ಕಲ್ಗಣೆ, ಮಾಜಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಹಾನುಬಾಳು ಭಾಸ್ಕರ್, ಡಿ.ಸಿ.ಸಣ್ಣಸ್ವಾಮಿ, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *