ಬೇಲೂರು : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನ ಮತದಾರರಿಗೆ ತಮ್ಮ ಮನೆಗಳಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿದ್ದು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಗಿಸುವ ಅಧಿಕಾರಿಗಳಿಗೆ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ತಾಲೂಕು ಆಡಳಿತ ವ್ಯವಸ್ಥೆಯಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು .

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನ ಮತದಾರರಿಗೆ ತಮ್ಮ ಮನೆಗಳಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಲಾಗಿತ್ತು.

ಪೋಲಿಂಗ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಬೆಳಗ್ಗೆ ಮತ್ತು ಮಧ್ಯಾಹ್ನ ಬೋಜನದ ವ್ಯವಸ್ಥೆಯನ್ನು ತಾಲೂಕು ಆಡಳಿತದಿಂದ ಏರ್ಪಡಿಸಲಾಗಿತ್ತು.

ಚುನಾವಣಾ ಪ್ರಕ್ರಿಯೆಯಲ್ಲಿ ಒಟ್ಟು 15 ವಾಹನಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಪ್ರತಿ ವಾಹನಕ್ಕೆ ಚಾಲಕ ಸೇರಿದಂತೆ ಚುನಾವಣಾ ಸಿಬ್ಬಂದಿಗಳು ವಿಡಿಯೋ ಗ್ರಾಫರ್ ಗಳನ್ನು ನೇಮಕ ಮಾಡಲಾಗಿತ್ತು.

ಮತದಾನಕ್ಕೆ ತೆರಳುವ ಸಿಬ್ಬಂದಿಗಳು ಹಾಗೂ ವಿಡಿಯೋಗ್ರಾಫರ್ ಗಳಿಗೆ ಯಾವುದೇ ಖಾಸಗಿ ವ್ಯಕ್ತಿಗಳಿಂದ ಪಾನೀಯ ಉಪಹಾರ ಸೇವಿಸಕೂಡದು ಎಂದು ತಿಳಿಸಲಾಗಿತ್ತು. ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಗೆ ತಾಲೂಕು ಆಡಳಿತ ಚುನಾವಣಾ ಅಧಿಕಾರಿಗಳಿಂದ ವ್ಯವಸ್ಥೆ ಮಾಡಲಾಗಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ವಾಹನಗಳಿಗೂ ಮಧ್ಯಾಹ್ನದ ಭೋಜನ ವ್ಯವಸ್ಥೆ ಹಾಗೂ ಕುಡಿಯುವ ನೀರನ್ನು ಕಲ್ಪಿಸಲಾಗಿತ್ತು.

ಚುನಾವಣೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದ. ಅಧಿಕಾರಿಗಳು ಸಿಬ್ಬಂದಿಗಳು ಈ ಬಾರಿಯ ಚುನಾವಣೆ ಪ್ರಕ್ರಿಯೆಯಲ್ಲಿ ತಾಲೂಕು ಆಡಳಿತ ಹಾಗೂ ಚುನಾವಣಾ ಅಧಿಕಾರಿಗಳು ಉತ್ತಮವಾದ ವ್ಯವಸ್ಥೆ ಮಾಡಿದ್ದಾರೆ ಎಂದು ತಹಸೀಲ್ದಾರ್ ಎಂ ಮಮತಾ ಹಾಗೂ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಜೊತೆಗೆ ಆಹಾರ ಇಲಾಖೆಯ ಅಧಿಕಾರಿಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *