ಬೇಲೂರು: ಪ್ರಧಾ‌ನಿ ನರೇಂದ್ರ ಮೋದಿಯವರ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ರಾತ್ರಿ ಬಂದು ಮಲಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಿದ್ದಪ್ಪ (50 ವರ್ಷ) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಇವರು ಮೂಲತಃ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಚನ್ನಪುರ ಗ್ರಾಮದವರು, ಪ್ರಸ್ತುತ ಬೇಲೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಇವರು ಈ ಹಿಂದೆ ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಬಾರಿ ಸುಮಾರು 11 ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿದ್ದರು.

ಭಾನುವಾರ ಮೈಸೂರಿನಲ್ಲಿ ಆಯೋಜನೆಯಾಗಿದ್ದ ಪ್ರಧಾನಮಂತ್ರಿ ನರೇಂದ್ರಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಸಿದ್ದಪ್ಪ, ಮಧ್ಯರಾತ್ರಿ ಮನೆಗೆ ವಾಪಾಸ್ಸಾಗಿ ನಿದ್ರೆಗೆ ಜಾರಿದ್ದರು.

ಕುಟುಂಬದವರು ಬೆಳಗ್ಗೆ ಗಮನಿಸಿದಾಗ ಅವರು ಮೃತಪಟ್ಟಿರುವುದು ತಿಳಿದಿದೆ. ಕಾನ್ಸ್‌ಟೇಬಲ್ ನಿಧನಕ್ಕೆ ಅರೇಹಳ್ಳಿ ಜನತೆ ಕಂಬನಿಗರೆದಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *