
ಹಾಸನ : ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರಕ್ಕೆ ಹೋಗಲು ಸೋಮವಾರದಂದು ನಗರದ ಶ್ರೀ ಸಿದ್ಧೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕರಪತ್ರವನ್ನು ಪ್ರದರ್ಶಿಸಿದ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಅವರು ಮತ ಕೇಳುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲು ಶ್ರೀ ಸಿದೇಶ್ವರ ದೇವಾಲಯದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಎಲ್ಲಾ ಸೇರಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯಲಾಗಿದೆ.
ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರು ಎರಡು ಲಕ್ಷಕ್ಕೂ ಅಧಿಕ ಮತ ಪಡೆದು ಗೆಲುವು ಸಾಧಿಸಲಿದ್ದಾರೆ ಎಂದರು.
ಮತ ಯಾಚನೆಗೆ ಮೈತ್ರಿ ಜೊತೆಯೇ ಹೋಗುತ್ತೇವೆ. ಮಂಗಳವಾರದಂದು ಬಿಜೆಪಿಯ ಹಾಸನ ಜಿಲ್ಲಾ ಉಸ್ತುವಾರಿ ಪ್ರಾಣೇಶ್ ಅವರು ಸಮನ್ವಯ ಸಭೆ ಕರೆದಿದ್ದು, ಸೋಮವಾರದಿಂದ ನಗರ ಮತ್ತು ಪ್ರತಿ ಹಳ್ಳಿ ಹಳ್ಳಿಗೂ ಕೂಡ ಕ್ಷೇತ್ರದಲ್ಲಿ ಪ್ರಚಾರ ಮಾಡಲು ನಾವುಗಳು ಸಾಂಕೇತಿಕವಾಗಿ ಪೂಜೆ ಸಲ್ಲಿಸಿದ್ದೇವೆ. ಮಾಜಿ ಶಾಸಕ ಪ್ರೀತಂ ಗೌಡ ಅವರು ಮೈಸೂರು ಉಸ್ತುವಾರಿ ವಹಿಸಿಕೊಂಡಿರುವುದರಿಂದ ಈ ಸಮಯದಲ್ಲಿ ಬರಲು ಸಾಧ್ಯವಾಗಿಲ್ಲ. ಮುಂದಿನ ವಾರದಲ್ಲಿ ಬರುವುದಾಗಿ ಹೇಳಿದ್ದು, ಈ ಬಗ್ಗೆ ಪ್ರಾಣೇಶ್ ಅವರು ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚೆಯಾಗಿ ಅಧಿಕೃತವಾಗಿ ತಿಳಿಯಲಿದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಚಾರದ ಓಪನ್ ವಾಹನದ ಸುತ್ತಾ ಮೈತ್ರಿ ಮುಖಂಡರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಪ್ರಧಾನಿ ನರೇಂದ್ರ, ಮೋದಿ, ಹೆಚ್.ಡಿ. ಕುಮಾರಸ್ವಾಮಿ, ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ವಿಜೆಯೇಂದ್ರ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ವಿಧಾನ ಪರಿಷತ್ತು ಸದಸ್ಯ ಸೂರಜ್ ರೇವಣ್ಣ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇವರ ಭಾವಚಿತ್ರಗಳು ರಾರಾಜಿಸುತಿತ್ತು.
ಇದೆ ವೇಳೆ ಜಿಪಂ ಮಾಜಿ ಅಧ್ಯಕ್ಷ ಬಿ.ಆರ್. ಸತ್ಯನಾರಾಯಣ್, ನಗರಸಭೆ ಮಾಜಿ ಸದಸ್ಯ ಮಹೇಶ್, ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಸ್. ಅನೀಲ್ ಕುಮಾರ್, ಜೆಡಿಎಸ್ ಮುಖಂಡರಾದ ಬಿದರಿಕೆರೆ ಜಯರಾಂ, ಶಿವಣ್ಣ ಇತರರು ಉಪಸ್ಥಿತರಿದ್ದರು.
