
ಬೆಂಗಳೂರು: ಕನ್ನಡ ಚಲನಚಿತ್ರದ ಹಿರಿಯ ಕಲಾವಿದ, ಹಾಸ್ಯನಟ ದ್ವಾರಕೀಶ್ ಅವರು ಇಂದು ನಿಧನರಾಗಿದ್ದಾರೆ. ಕನ್ನಡ ಸಿನಿಮಾದ ಕುಳ್ಳನ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.
ನಟ ದ್ವಾರಕೀಶ್ ಅವರ ಸಾವಿನ ಸುದ್ದಿ ತಿಳಿದ ಸ್ಯಾಂಡಲ್‌ವುಡ್ ಗಣ್ಯರು ಅವರ ನಿವಾಸಕ್ಕೆ ಆಗಮಿಸುತ್ತಿದ್ದಾರೆ.
ದ್ವಾರಕೀಶ್ ಅವರ ಮೃತದೇಹವನ್ನು ಸದ್ಯ ಅವರ ಸ್ಕೈಲ್ ಗ್ರೀನ್ಸ್ ವಿಲ್ಲಾದಲ್ಲಿ ಇಡಲಾಗಿದ್ದು, ಅನೇಕ ಗಣ್ಯರು ದ್ವಾರಕೀಶ್ ನಿವಾಸ್ಕಕ್ಕೆ ತೆರಳಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಹಿರಿಯ ನಿರ್ದೇಶಕ ಭಾರ್ಗವ್ ಅವರು ದ್ವಾರಕೀಶ್ ಅಂತಿಮ ದರ್ಶನ ಪಡೆಯಲು ಭೇಟಿ ನೀಡಿದ್ದು, ವಿಷ್ಣುವರ್ಧನ್‌ಗೆ ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದ ದ್ವಾರಕೀಶ್ ಅವರ ಸಾಧನೆಯನ್ನು ಸ್ಮರಿಸಿಕೊಂಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ದ್ವಾರಕೀಶ್ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. ಇವತ್ತು ಸ್ಮೈಲ್ ಗ್ರೀನ್ಸ್ ವಿಲ್ಲಾದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ದ್ವಾರಕೀಶ್ ಪುತ್ರ ಹೇಳಿಕೆ ನೀಡಿದ್ದಾರೆ.
ದ್ವಾರಕೀಶ್ ಅವರ ನಿವಾಸದಿಂದ ಮೃತದೇಹವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ತರಲಾಗುತ್ತಿದೆ. ನಾಳೆ ಬೆಳಗ್ಗೆ 6 ಗಂಟೆಗೆ ದ್ವಾರಕೀಶ್ ಅವರಿಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ಗೌರವ ಸಲ್ಲಿಸಲಾಗುವುದು. ಸಾರ್ವಜನಿಕರಿಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ನಮನ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತಿದೆ.
ರವೀಂದ್ರ ಕಲಾಕ್ಷೇತ್ರದಲ್ಲಿ ನಟ ದ್ವಾರಕೀಶ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ತೀರ್ಮಾನ ಮಾಡಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ನಮನ ಸಲ್ಲಿಸಿದ ಬಳಿಕ ನಾಳೆ ಚಾಮರಾಜಪೇಟೆಯ ಟಿ.ಆರ್ ಮಿಲ್‌ನಲ್ಲಿ ದ್ವಾರಕೀಶ್ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.
