
ಹಾಸನ: ನಗರದ ಕೆ. ಹೊಸಕೊಪ್ಪಲುನಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಪೂಜೆ ಸಲ್ಲಿಸಿ ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಮತ ಯಾಚನೆ ಮಾಡಿದರು.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಹಾಗೂ ಪಕ್ಷದ ಮುಖಂಡ ಬನವಾಸೆ ರಂಗಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿ, ನಗರದ ೩೫ನೇ ವಾರ್ಡಿನ ಕೆ. ಹೊಸಕೊಪ್ಪಲು ಗ್ರಾಮದಲ್ಲಿರುವ ಶ್ರೀ ಆಚಿಜನೇಯ ದೇವಸ್ಥಾನದಲ್ಲಿ ಶಾಸ್ತ್ರೋತ್ತವಾಗಿ ಪೂಜೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಪ್ರಚಾರಕ್ಕೆ ಚಾಲನೆ ಕೊಡಲಾಗಿದೆ.
ಕೆ. ಹೊಸಕೊಪ್ಪಲು, ಎಂ. ಹೊಸಕೊಪ್ಪಲು, ಬೊಮ್ಮನಾಯಕನಹಳ್ಳಿ, ಸಂಕಲಾಪುರ ಸೇರಿದಂತೆ ಆರು ಗ್ರಾಮದ ಜನತೆ ಸೇರಿ ಪ್ರಚಾರ ಮಾಡಲಾಗುತ್ತಿದೆ ಎಂದರು. ನಗರಸಭೆ ಮಾಜಿ ಸದಸ್ಯ ರವಿಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಈ ಪ್ರಚಾರದಲ್ಲಿ ಭಾಗವಹಿಸಿ ಮನೆಮನೆಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಬಗ್ಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ. ನಮ್ಮ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಗೆಲುವಿಗೆ ಎಲ್ಲಾರೂ ಶ್ರಮಿಸೋಣ ಎಂದು ಹೇಳಿದರು.
ಇದೆ ವೇಳೆ ಕಾಂಗ್ರೆಸ್ ಮುಖಂಡರಾದ ಹೆಚ್.ಕೆ. ಮಹೇಶ್, ಬಿ.ಪಿ. ಮಂಜೇಗೌಡ, ಬನವಾಸೆ ರಂಗಸ್ವಾಮಿ, ನಗರಸಭೆ ಮಾಜಿ ಸದಸ್ಯ ರವಿಕುಮಾರ್, ಅಸ್ಲಾಂ. ದಾಸರಕೊಪ್ಪಲು ರಘು, ಲೋಕೇಶ್, ರಾಘವೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.



