ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಇಂದು ಬೆಳಗೋಡು ಹೋಬಳಿಯಲ್ಲಿ ಮಾಜಿ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಹಾಗೂ ಚಂಚಲ ಕುಮಾರಸ್ವಾಮಿ ಬಿರುಸಿನ ಪ್ರಚಾರ ನಡೆಸಿದರು.

ಬಾನುವಾರ ಬೆಳಗೋಡು ಹೋಬಳಿಯಲ್ಲಿ ಪ್ರಚಾರ ಕಾರ್ಯ ನಡೆಸಿದ ಮಾಜಿ ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ಅವರು ಮನೆ ಮನೆಗೆ ತೆರಳಿ ಪ್ರಜ್ವಲ್ ರೇವಣ್ಣ ಅವರಿಗೆ ಮತದಾನ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಎಪಿಎಂಸಿ ಸದಸ್ಯರಾದ ಕವನ್ ಗೌಡ ,ಮಾಜಿ ತಾಲೂಕು ಪಂಚಾಯಿತಿ ಅದ್ಯಕ್ಷರಾದ ಮಂಜುಳ ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *