
ಚನ್ನರಾಯಪಟ್ಟಣ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್, ಸರ್ಕಾರಿ ಆಸ್ಪತ್ರೆ, ತಾಲೂಕು ಕಾನೂನು ಸೇವಾ ಸಮಿತಿ, ಲಯನ್ಸ್ ಕ್ಲಬ್,,ಶಾಲಿನಿ ವಿದ್ಯಾ ಶಾಲೆ ಇವರ ಸಹಯೋಗದಲ್ಲಿ ಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು,
ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯಿತು. ಇದೇ ಸಂದರ್ಭದಲ್ಲಿ ನ್ಯಾಯಾಧೀಶರಾದ ದೇವಾನಂದ್, ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಸಿ ಎನ್ ಅಶೋಕ್, ಸರ್ಕಾರಿ ಆಸ್ಪತ್ರೆಯ ಆಡಳಿತ ಅಧಿಕಾರಿಗಳಾದ ಡಾ. ವಿ ಮಹೇಶ್, ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಾಗರಾಜು, ಮಕ್ಕಳ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾದ ಮಹಾದೇವ್, ಸಂಘಟನಾ ಕಾರ್ಯದರ್ಶಿ ಮನೋಹರ್, ಎ ಎಂ ಜಯರಾಮ್, ಎ ಎಲ್ ನಾಗೇಶ್, ಲಯನ್ಸ್ ಕ್ಲಬ್ ನ ಪದಾಧಿಕಾರಿಗಳಾದ ದೊಡ್ಡತರಹಳ್ಳಿ ಮಂಜು, ವಕೀಲರಾದ ಗಿರೀಶ್ ಸೇರಿದಂತೆ ಇತರರು ಹಾಜರಿದ್ದರು.



